ಮತ್ತೆ ಥ್ರಿಲ್ಲರ್ ಮಂಜು ಡೆಡ್ಲಿ ಕಿಲ್ಲರ್ ಗೆ ಆಕ್ಷನ್ ಕಟ್

 ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ  ಡೆಡ್ಲಿ ಕಿಲ್ಲರ್, ಕೀರ್ತಿ ಸಿಲ್ವರ್ ಸ್ಕ್ರೀನ್‌ ಹಾಗೂ  ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಚಿತ್ರ ನಿರ್ಮಿಸಿದ್ದಾರೆ. 

ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್  ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ.

 ಯುವನಟ  ಅಭಯ್‌ವೀರ್ ಹಾಗೂ ನಿವೀಕ್ಷಾ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.  ಐವರು ವಿಲನ್‌ಗಳ ಜೊತೆ ಹುಡುಗಿಯೊಬ್ಬಳನ್ನು ಪೊಲೀಸರು ಆಂದ್ರ ಪ್ರದೇಶದಲ್ಲಿ ಬಂಧಿಸಿ, ಕರ್ನಾಟಕಕ್ಕೆ ಕರೆತರುವಾಗ ಮಾರ್ಗಮದ್ಯೆ ಕಾಡಲ್ಲಿ ಅವರುಗಳು ಪೋಲೀಸರಿಂದ ಎಸ್ಕೇಪ್ ಆಗುತ್ತಾರೆ, ಅಲ್ಲಿಂದ ಅವರು ರಕ್ಷಣೆಗಾಗಿ ಕಾಡಲ್ಲಿರುವ ಮನೆಯೊಂದಕ್ಕೆ ಹೋಗುತ್ತಾರೆ. ನಂತರ ಅವರೆಲ್ಲ ಅದೇ ಮನೆಯಲ್ಲಿ ಲಾಕ್ ಆಗಿಬಿಡುತ್ತಾರೆ, ಮುಂದೇನಾಯ್ತು ಅನ್ನೋದೇ ಚಿತ್ರದ ಕುತೂಹಲ. ಈ ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ವಿನು ಮನಸು  ಸಂಗೀತವಿದೆ. ಮಲ್ಲಿಕಾರ್ಜುನ್  ಛಾಯಾಗ್ರಹಣ, ದೀಪು  ಸಂಕಲನಬಿದೆ.

ನಿರ್ದೇಶಕ ಥ್ರಿಲ್ಲರ್ ಮಂಜು ಅವರೇ ಎಲ್ಲಾ ಆಕ್ಷನ್ ಗಳನ್ನು ಕಂಪೋಜ್ ಮಾಡಿದ್ದಾರೆ. ಲೋಕೇಂದ್ರ ಸೂರ್ಯ,  ಥ್ರಿಲ್ಲರ್ ಮಂಜು, ಸುನಿಲ್ ಬಾಲ್ಡರ್ ಮುಂತಾದವರು  ಚಿತ್ರದ ಉಳಿದ ಪಾಅತ್ರಗಳಲ್ಲಿ ನಟಿಸಿದ್ದಾರೆ.  ಸದ್ಯದಲ್ಲೇ ಡೆಡ್ಲಿ ಕಿಲ್ಲರ್ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.