ಮತ್ತೆ ಭೂಕಂಪನ ಅನುಭವ

ವಿಜಯಪುರ: ನ.7:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ
ಬಸವನ ಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಿಂದ ದಕ್ಷಿಣಕ್ಕೆ 2 ಕಿ. ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ
ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಸುತ್ತಮುತ್ತ ಬೆ. 11.15ಕ್ಕೆ ಭಾರಿ ಶಬ್ದ ಕೇಳಿ ಬಂದಿದ್ದು ನಂತರ ಭೂಮಿ ಕಂಪಿಸಿದೆ ಎಂದು ಮನಗೂಳಿ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ತಿಳಿಸಿದ್ದಾರೆ.