ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ!

 ಸಂಜೆವಾಣಿ ವಾರ್ತೆ

ಶಿವಮೊಗ್ಗ, ಏ.೧೬: ಕಳೆದ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ!ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ತಮ್ಮ ನಾಲ್ವರು ಬೆಂಬಲಿಗರೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.ಶುಕ್ರವಾರ ಬೆಳಿಗ್ಗೆ ತಮ್ಮ ಬೆಂಬಲಿಗರ ಮೂಲಕ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದರು. ನಂತರ ಅದೇ ದಿನ ತಾವೇ ಖುದ್ದಾಗಿ ಆಗಮಿಸಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಸೋಮವಾರ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದು ಕಾರಣವೇನೆಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.