ಮತ ಎಣಿಕೆ ಕೇಂದ್ರದ ಮುಂದೆ ನೂಕುನುಗ್ಗಲು: ಲಘು ಲಾಠಿ ಪ್ರಹಾರ

ಬೀದರ್,ಡಿ.30-ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ಕೇಂದ್ರದ ಮುಂದೆ ಜನಜಾತ್ರೆ ಜಮಾಯಿಸಿ ನೂಕು ನುಗ್ಗಲು ಉಂಟಾಗಿದ್ದರಿಂದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಇಂದಿಲ್ಲಿ ನಡೆಯಿತು.
ನಗರದ ಬಿ.ವಿ ಭೂಮರೆಡ್ಡಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ನೂಕು ನುಗ್ಗಲು ಆದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸುವುದರ ಮೂಲಕ ಜನರನ್ನು ಚದುರಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಮುಂದೆ ಜನ ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಅಷ್ಟಾಗಿಯೂ ಜನ ಯಾವುದಕ್ಕೂ ಕೇರ್ ಮಾಡದೆ ಮತ ಎಣಿಕೆ ಕೇಂದ್ರದ ಮುಂದೆ ಜಮಾವಣೆಗೊಂಡಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಬೀದರ್ ಜಿಲ್ಲೆಯಲ್ಲಿ ಮಾತ್ರ ಪ್ರಥಮ ಬಾರಿಗೆ ಗ್ರಾಮ ಪಂಚಾಯತಿ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗಿದ್ದು, ಫಲಿತಾಂಶ ಬೇಗ ಹೊರ ಬೀಳುವ ನಿರೀಕ್ಷೆ ಇದೆ.