ಮತ ಎಣಿಕೆ ಗೋಲ್‌ಮಾಲ್ಟ್ರಂ ಪ್ ಆರೋಪ ನಿರಾಕರಣೆ

President Donald Trump speaks during a news conference at his Trump National Golf Club in Bedminster, N.J., Saturday, Aug. 15. (AP Photo/Susan Walsh)

ವಾಷಿಂಗ್ಟನ್, ನ. ೧೩- ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಆರೋಪವನ್ನು ಚುನಾವಣಾ ಅಧಿಕಾರಿಗಳು ಅಲ್ಲಗಳೆದಿದ್ದಾರೆ.

ಮತಎಣಿಕೆಯಲ್ಲಿ ಯಾವುದೇ ಅವ್ಯವಹಾರ ಆಗಿರುವುದು ಅಥವಾ ಮತಪತ್ರಗಳು ಬದಲಾಗಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನವಂಬರ್ ೩ರಂದು ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅವರು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪರಾಭವಗೊಳಿಸಿ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜೋ ಬೈಡನ್ ಅಧ್ಯಕ್ಷರಾಗಿ ಆಯ್ಕೆಯಾದ ಕ್ರಮವನ್ನು ಡೊನಾಲ್ಡ್ ಟ್ರಂಪ್ ಅಕ್ರಮ ಎಂದು ಆರೋಪಿಸಿದಗದರು ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸ್ಪಷ್ಟನೆ ನೀಡಿ ಮತಎಣಿಕೆಯಲ್ಲಿ ಯಾವುದೇ ಗೊಂದಲ ಅಥವಾ ಮತಪತ್ರಗಳ ದುರುಪಯೋಗ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ.

ದೇಶಾದ್ಯಂತ ಬಿಗಿ ಭದ್ರತೆಯಲ್ಲಿ ಮತಎಣಿಕೆ ನಡೆಸಲಾಗಿದೆ ಯಾವುದೇ ಅವ್ಯವಹಾರಕ್ಕೆ ಅಥವಾ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಲಪ್ಪದ ಟ್ರಂಪ್:

ಅಮೆರಿಕ ಅಧ್ಯಕ್ಷೀಯ ಚುನಾವಣೆ ಬಗ್ಗೆ ವಾರ ಕಳೆದರೂ ಇನ್ನೂ ಚುನಾವಣೆಯಲ್ಲಿ ಪರಾಭವಗೊಂಡಿರುವುದನ್ನು ಒಪ್ಪಿಕೊಳ್ಳಲು ಡೊನಾಲ್ಡ್ ಟ್ರಂಪ್ ಅವರು ಸೋಲೊಪ್ಪಿಕೊಳ್ಳಲು ನಿರಾಕರಿಸುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಚುನಾವಣೆಯಲ್ಲಿ ಪರಾಭವಗೊಂಡಿದ್ದರು, ಸೋನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದು ಕುಟುಂಬದ ಸದಸ್ಯರು ಸೇರಿದಂತೆ ರಿಪಬ್ಲಿಕನ್ ಪಕ್ಷದ ಅನೇಕ ಮುಖಂಡರು ಮತದಾರರ ತೀರ್ಪು ಸ್ವಾಗತಿಸುವಂತೆ ಮನವಿ ಮಾಡಿದ್ದಾರೆ.

ಆರೋಪ ನಿರಾಕರಣೆ:
ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಮತಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಡೊನಾಲ್ಡ್ ಟ್ರಂಪ್ ಅವರ ಆರೋಪದಲ್ಲಿ ಎಳ್ಳಷ್ಟು ಹುರುಳಿಲ್ಲ. ಈ ಕುರಿತು ಸುಖಾಸುಮ್ಮನೆ ಆರೋಪ ಮಾಡಬಾರದು ನಾವು ಅದಕ್ಕೆ ಅವಕಾಶವನ್ನು ಮಾಡಿಕೊಟ್ಟಿಲ್ಲ ಎಂದು ಫೆಡರಲ್ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಅಮೆರಿಕದ ಇತಿಹಾಸದಲ್ಲೇ ಅತ್ಯಧಿಕ ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಅವರು ಮುಂದಿನ ವರ್ಷ ಜನವರಿ ೨೦ ರಂದು ಅಮೇರಿಕಾದ ೪೬ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮುಂದಿನ ಆಡಳಿತಕ್ಕೆ ಅನುಕೂಲವಾಗಲು ಜೋ ಬೈಡನ್ ಅವರು, ಆಯಕಟ್ಟಿನ ಸ್ಥಳಗಳಿಗೆ ಅಧಿಕಾರಿಗಳ ನೇಮಕ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.

ಕೊರೋನೋ ನಿರ್ವಹಣೆಗೆ ಆದ್ಯತೆ:
ದೇಶದಲ್ಲಿ ಅತಿ ಹೆಚ್ಚಿನ ಸೋಂಕು ಮತ್ತು ಸಾವಿಗೆ ಕಾರಣವಾಗಿರುವ ಕೊರೋನಾ ಸೋಂಕು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಜೋ ಬೈಡೆನ್ ಅವರು ಹೇಳಿದ್ದಾರೆ