
ಕಲಬುರಗಿ,ಮೇ.11: ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಮೇ 13 ರಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ, ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 13ರ ಬೆಳಿಗ್ಗೆ 6 ಗಂಟೆಯಿಂದ ಮೇ 14ರ ಬೆಳಿಗ್ಗೆ 6 ಗಂಟೆ ವರೆಗೆ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತಹ ಎಲ್ಲಾ ತರಹದ ಮದ್ಯ ಮಾರಾಟ, ಶೇಖರಣೆ, ಮದ್ಯಪಾನವನ್ನು ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 135 (ಸಿ) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳು ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ನಿಯಮ-10 (ಬಿ) ರನ್ವಯ ನಿಷೇಧಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದಾರೆ.
ಇದಲ್ಲದೇ ಬಾರ್‍ಗಳು, ಕ್ಲಬ್‍ಗಳು, ಬಾರ್ ರೆಸ್ಟೋರೆಂಟ್ ಹಾಗೂ ಮದ್ಯದ ಡೀಪೋ (ಕೆ.ಎಸ್.ಬಿ.ಸಿ.ಎಲ್.) ಗಳನ್ನು ಮುಚ್ಚುವುದರೊಂದಿಗೆ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ “ಶುಷ್ಕ” (ಆಡಿಥಿ ಆಚಿಥಿs) ದಿನಗಳೆಂದು ಘೋಷಿಸಲಾಗಿದೆ.
ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಅಧಿನಿಯಮ-1951ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡಿಸಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.