ಮತ ಚಲಾಯಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್‌- ಪ್ರಭಾ ಮಲ್ಲಿಕಾರ್ಜುನ್‌


ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೭;ದಾವಣಗೆರೆಯ ಐಎಂಎ ಹಾಲ್ ನಲ್ಲಿರುವ ಮತಗಟ್ಟೆ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್‌ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ತಮ್ಮ ಮತ ಚಲಾಯಿಸಿದರು.ಈ ವೇಳೆ ಪುತ್ರ ಸಮರ್ಥ್ ಶಾಮನೂರು ಹಾಗೂ ಪುತ್ರಿ ಶ್ರೇಷ್ಠಾ ಶಾಮನೂರು ಅವರೂ ಕೂಡ ತಮ್ಮ ಮತ ಚಲಾಯಿಸಿದರು.ಅವರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅಭಿಮಾನಿಗಳು ಉಪಸ್ಥಿತರಿದ್ದರು.