ಮತ ಚಲಾವಣೆ ನಮ್ಮೆಲ್ಲರ ಜವಾಬ್ದಾರಿ

ಕೆಂಗೇರಿ,ಏ.೨೧:ನಮ್ಮದು ಪ್ರಜಾಪ್ರಭುತ್ವ ದೇಶ. ಹಕ್ಕನ್ನು ಚಲಾಯಿಸುವುದು ನಮ್ಮ ಜವಾಬ್ದಾರಿ. ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಇದು ಕರ್ತವ್ಯವೂ ಹೌದು’ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್ ತಿಳಿಸಿದರು
ಯಶವಂತಪುರ ವಿಧಾನಸಭಾ ಕ್ಷೇತ್ರದ ತರಳು ಗ್ರಾಮ ಪಂಚಾಯಿತಿಯಲ್ಲಿ ೨೦೨೪ರ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಮತದಾನ ಅತ್ಯಂತ ಪವಿತ್ರ ಕಾರ್ಯವಾಗಿದ್ದು ಸದೃಢ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ಮತದಾರರ ಸಹಭಾಗಿತ್ವ ಅತ್ಯಗತ್ಯ. ಪ್ರತಿಯೊಬ್ಬ ನಾಗರೀಕನು ತಪ್ಪದೇ ಮತದಾನ ಮಾಡಬೇಕು, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆಮಾಡುವುದರಿಂದ ದೇಶದ ದಿಕ್ಕನ್ನು ಪ್ರಗತಿಪರ ಹಾದಿಯಲ್ಲಿ ಅಭಿವೃದ್ಧಿಯತ್ತ ಸಾಗಿಸಬಹುದು. ಮತದಾರರು ಜಾತಿ, ಹಣ ಮುಂತಾದ ಆಮಿಷಗಳಿಗೆ ಒಳಗಾಗದೆ ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕು. ಯುವಕರೇ ದೇಶದ ಬೆನ್ನೆಲುಬಾಗಿರುವುದರಿಂದ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅನಿತ ಮಾತನಾಡಿ ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ವಿದ್ಯಾರ್ಥಿಯು ಹಳ್ಳಿಗಳಲ್ಲಿ ಮತದಾನದ ಬಗ್ಗೆ ತಿಳಿಹೇಳಬೇಕು. ಎಲ್ಲರೂ ಸಾಮಾಜಿಕವಾಗಿ ತಮ್ಮ ಕರ್ತವ್ಯನಿರ್ವಹಿಸಬೇಕು ಎಂದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿಂದು ರವರು ಮಾತನಾಡಿ ನಮ್ಮ ಭಾರತ ದೇಶ ವಿಶ್ವದಲ್ಲಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದೆ ಮತದಾನ ಪ್ರತಿಯೊಬ್ಬರ ಹಕ್ಕು ಇದನ್ನು ಚಲಾಯಿಸುವುದು ನಮ್ಮ ಕರ್ತವ್ಯ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಿಳಿಸಿದರು
ತರಳು ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜೇಮ್ಸ್ ಮಾತನಾಡಿ ಯಾವುದೇ ಆಮಿಷಕ್ಕೂ ಒಳಗಾಗದೆ ನಿರ್ಭಯವಾಗಿ ಮುಕ್ತ ಹಾಗೂ ಪಾರದರ್ಶಕ ವಾತಾವರಣದಲ್ಲಿ ತಮ್ಮ ಮತವನ್ನು ಚಲಾಯಿಸಿ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸಿ ಹಲವು ಹಂತದ ಈ ಚುನಾವಣೆಯಲ್ಲಿ ನಮ್ಮ ದೇಶದ ಆಡಳಿತವನ್ನು ನಡೆಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಚುನಾವಣೆಗಳಿಗೆ ಅತಿ ಮಹತ್ವ ನೀಡಬೇಕಾಗುತ್ತದೆ. ಈ ಚುನಾವಣೆಯ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಮುಕ್ತವಾಗಿ ಭಾಗವಹಿಸಿ ಏಪ್ರಿಲ್ ೨೬ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಹಾಗೂ ರಂಗೋಲಿ ಸ್ಪರ್ಧೆ ಮೂಲಕ ಮತದಾನ ಜಾಗೃತಿ ಮೂಡಿಸಿದರು.