ಮತ ಜಾಗೃತಿಗೆ ಕ್ರಿಕೆಟ್


ಧಾರವಾಡ,mಂ.31:ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ಮುಂಜಾನೆ ಕೆಸಿಡಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಮಾತನಾಡಿದ
ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಸುಭದ್ರಗೊಳಿಸುವಂತೆ ಕರೆ ನೀಡಿದರು. ನಗರ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ಮತದಾನವಾಗುತ್ತಿದ್ದು, ಸುಶಿಕ್ಷಿತರು ತಪ್ಪದೇ ಮತ ಚಲಾಯಿಸಬೇಕು. ಕ್ರಿಕೆಟ್ ಆಡುವ ಮೂಲಕ ವಿನೂತನವಗಿ ಮತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಜಿಪಂ ಸಿಇಒ ಸ್ವರೂಪ ಟಿಕೆ ಮಾತನಾಡಿ ಈ ಬಾರಿ ಶೇ 75 ಮತದಾನ ಅಗುವ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಜಿಲ್ಲಾಧಿಕಾರಿಗಳು ಬ್ಯಾಟಿಂಗ ಮಾಡುವ ಮೂಲಕ ಚಾಲನೆ ನೀಡಿದರು. ಪೆÇಲೀಸ್ ಕಮಿಷನರ ರೇಣುಕಾ ಸುಕುಮಾರನ್ ಬೌಲಿಂಗ ಮಾಡಿದರು. ಪೆÇೀಲಿಸ ವರಿಷ್ಟಾಧಿಕಾರಿ ಡಾ ಗೋಪಾಲ ಬ್ಯಾಕೋಡ, ಜಿಪ್‍ಂ ಯೋಜನಾಧಿಕಾರಿ ದೀಪಕ ಮಡಿವಾಳರ, ನೌಕರರ ಸಂಘದ ಅಧ್ಯಕ್ಷ ಎಸ್ ಎ¥sóï ಸಿದ್ಧನಗೌಡರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಪಂದ್ಯಾವಳಿಗಳ ಮದ್ಯೆ ಮತದಾರರ ಜಾಗೃತಿ ಕುರಿತಾದ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು.
ಡಿಸಿ ಕಚೆರಿ ತಂಡ, ಪೆÇೀಲಿಸ, ಗ್ರಾಮೀಣ ಅಭಿವ್ರದ್ಧಿ, ಶಿಕ್ಷಣ, ಆರೋಗ್ಯ, ವಿಕಲಚೇತನ, ಯುವಸಬಲಿಕರಣ, ಇಲಾಖೆಗಳ ತಂಡ ಸೇರಿದಂತೆ ಮಾಧ್ಯಮದ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.