ಮತ ಜಾಗ್ರತಿಗೆ ಚಿತ್ರಕಲಾ ಸ್ಪರ್ಧೆ

ಧಾರವಾಡ, ಏ 15: ಮತದಾರರ ಜಾಗೃತಿಗಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿ ಧಾರವಾಡದ ಕಿತ್ತೂರ ರಾಣಿ ಚೆನ್ನಮ್ಮ ಉದ್ಯಾನವನದಲ್ಲಿ 18ರಿಂದ 60 ವರ್ಷದೊಳಗಿನ ಮತದಾರರಿಗೆ ಮುಕ್ತ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತ್ತು. ಸ್ಪರ್ಧೆಯಲ್ಲಿ ಸುಮಾರು 400 ಯುವ ಮತದಾರರು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ವೈವಿಧ್ಯಮಯ ಚಿತ್ರಗಳನ್ನು ಬಿಡಿಸಿದರು.
ಜಿಲ್ಲಾ ಪಂಚಾಯತ ಸಿಇಓ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಸ್ವರೂಪ ಟಿ.ಕೆ. ವಿವಿಧ ಚಿತ್ರಗಳನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಚಿತ್ರಕಲೆ ಮೂಲಕ ವಿಭಿನ್ನವಾಗಿ ಮತದಾರರ ಸಂದೇಶ ಸಾರುವ ಆಯ್ದ ಅತ್ಯುತ್ತಮ ಚಿತ್ರಗಳಿಗೆ ಬಹುಮಾನ ನೀಡಲಾಗುವುದೆಂದರು.
ಮೇ 7 ಕ್ಕೆ ಎಲ್ಲರೂ ಸಹ ತಪ್ಪದೇ ಮತ ಚಲಾಯಿಸುವಂತೆ ಹಾಗೂ ಸುತ್ತಮುತ್ತಲಿನ ಎಲ್ಲರಿಗೂ ಪ್ರೇರಿಪಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹಾಗೂ ಇತರರು ಉಪಸ್ಥಿತರಿದ್ದರು.