ಮದಗಜ ತೆರೆಗೆ ಸಿದ್ಧತೆ

* ಚಿ.ಗೋ ರಮೇಶ್

ಶ್ರೀ ಮುರಳಿ ನಾಯಕರಾಗಿ ನಟಿಸಿರುವ “ಮದಗಜ” ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳ ಮೊದಲ ವಾರ ತೆರೆಯ ಮೇಲೆ “ಮದಗಜ” ಕಾಣಿಸಿಕೊಳ್ಳಲಿದ್ದಾನೆ. ಚಿತ್ರದ ಟ್ರೇಲರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆ ಮಾಡಿ ಶುಭ ಹಾರೈಸಿ

ತಮ್ಮ ಮಾತಿನುದ್ದಕ್ಕೂ ಪುನೀತ್ ರಾಜಕುಮಾರ್ ಅವರನ್ನು  ನೆನಪಿಸಿಕೊಂಡರು. ನಾಯಕ ಶ್ರೀಮುರಳಿ, ಚಿತ್ರ ಇಷ್ಟು ಚೆನ್ನಾಗಿ ಬಂದಿದೆ ನಿರ್ದೇಶಕರು ಹೇಳಿದಂತೆ ನಾನು ನಟಿಸಿದ್ದೇನೆ.‌ ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ನೋಡಿಹಾರೈಸಿ ಅಂದರು ನಟಿ ಆಶಿಕಾ‌ ರಂಗನಾಥ್,ಚಿತ್ರದಲ್ಲಿ ಪಲ್ಲವಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ . ಪಾತ್ರ ಚೆನ್ನಾಗಿ ಬಂದಿದೆ ಎಂದು ವಿವರ ನೀಡಿದರು.

ನಿರ್ದೇಶಕ ಮಹೇಶ್ ಕುಮಾರ್ ,ನಿರ್ಮಾಪಕರು ತಂದೆ, ತಾಯಿ ಇದ್ದ ಹಾಗೆ. ಚಿತ್ರದ ಕಥೆ ಕೇಳಿ ಸಿನಿಮಾ ಮಾಡೋಣ ಎಂದ ನಾಯಕ ಶ್ರೀಮುರಳಿ ಅವರಿಗೆ.. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ನನ್ನ ಇಡೀ ತಂಡಕ್ಕೆ ಧನ್ಯವಾದ. ಡಿಸೆಂಬರ್ 3ರಂದು ತೆರೆಗೆ ಬರಲಿದೆ ಎಂದರು.

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ , ಸಿನಿಮಾ ಎಂದರೆ ಮಾಯಾಬಜಾರ್ ಅಲ್ಲ.. ಇಲ್ಲಿ ಸಾಕಷ್ಟು ಜನರ ಶ್ರಮವಿರುತ್ತದೆ. ಒಂದು ಒಳ್ಳೆಯ ಚಿತ್ರ ಮೂಡಿಬರಲು ಎಲ್ಲರು ಒಟ್ಟಾಗಿ ಶ್ರಮಿಸಬೇಕು ಎಲ್ಲರ ಪ್ರೋತ್ಸಾಹವಿರಲಿ ಎಂದರು. ಕಲಾವಿದರಾದ ಚಿಕ್ಕಣ್ಣ, ಧರ್ಮಣ್ಣ, ಶಿವರಾಜ್ ಕೆ ಆರ್ ಪೇಟೆ, ಅನಿಲ್ ಹಾಗೂ ಚಿತ್ರದ ತಂತ್ರಜ್ಞರು ಚಿತ್ರದ ಬಗ್ಗೆ ಮಾತನಾಡಿದರು.