ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯಿಂದ ಮೋಸ: ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

ಮದ್ದೂರು: ನ.03: ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯಿಂದ ಮೋಸಕ್ಕೊಳಗಾದ ಹಿನ್ನಲೆಯಲ್ಲಿ ಮನನೊಂದ ಮಹಿಳೆ ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೋರಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಜರುಗಿದೆ.
ಗ್ರಾಮದ ನೇತ್ರಾವತಿ (32), ಶೋಭಿತಾ (9), ನಂದೀಶ್ (7) ಎಂಬುವರೇ ಮೃತಪಟ್ಟ ದುರ್ದೈವಿಗಳು. ಸೋಮು ಎಂಬುವರನ್ನು ಮದುವೆಯಾಗಿದ್ದ ನೇತ್ರಾವತಿ ನಂತರದ ದಿನಗಳಲ್ಲಿ ಗಂಡನನ್ನು ಕಳೆದುಕೊಂಡಿದ್ದಳು. ಅದೇ ಗ್ರಾಮದ ಆನಂದ್ ಎಂಬಾತ ಮದುವೆಯಾಗುವುದಾಗಿ ನಂಬಿಸಿದ್ದ ಎನ್ನಲಾಗಿದೆ. ಜೊತೆಗೆ ಆಕೆಯಿಂದ ಹಣವನ್ನೂ ಪಡೆದಿದ್ದ ಎನ್ನಲಾಗಿದೆ. ಆದರೆ ಇತ್ತೀಚೆಗೆ ಈತ ಬೇರೆ ಮಹಿಳೆ ಜೊತೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಇದಲ್ಲದೆ, ರಾಜೀ ಪಂಚಾಯಿತಿ ಮಾಡಿದಾಗಲೂ ನ್ಯಾಯ ಸಿಕ್ಕಿರಲಿಲ್ಲ ಎನ್ನಲಾಗಿದೆ.
ಈ ಎಲ್ಲದ್ದರಿಂದ ಮನನೊಂದ ನೇತ್ರಾವತಿ ಸೋಮವಾರ ರಾತ್ರಿ ತನ್ನ ಮನೆಯಲ್ಲಿ ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಅಸ್ವಸ್ಥಳಾಗಿದ್ದರು. ಅಕ್ಕ ಪಕ್ಕದವರು ಅಸ್ವಸ್ಥರಾಗಿರುವುದನ್ನು ಕಂಡು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಅಷ್ಟಲ್ಲಿ ಶೋಭಿತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು.
ನೇತ್ರಾವತಿ ಮತ್ತು ನಂದೀಶ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ತಾಯಿ ಮಗ ಇಬ್ಬರೂ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ಪೃಥ್ವಿ, ವೃತ್ತ ನಿರೀಕ್ಷಕ ಶಿವಮಲ್ಲಯ್ಯ, ಸಬ್‍ಇನ್ಸ್‍ಪೆಕ್ಟರ್ ಶೇಷಾದ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕೆ.ಎಂ. ದೊಡ್ಡಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಆನಂದ್‍ನನ್ನು ಪೆÇಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.