ಮದುವೆ ಖುಷಿಯಲ್ಲಿ ವರ ಹಾರಿಸಿದ ಗುಂಡಿಗೆ ಸ್ನೇಹಿತ ಬಲಿ

ಲಕ್ನೋ(ಉತ್ತರ ಪ್ರದೇಶ), ಜೂ.23-ಮದುವೆ ಮೆರವಣಿಗೆ ಸಂದರ್ಭದಲ್ಲಿ ವರನೊಬ್ಬ ಖುಷಿಯಿಂದ ಗುಂಡು ಹಾರಿಸಿದಾಗ ಅಲ್ಲೇ ಇದ್ದ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ ದಾರುಣ ಘಟನೆ ಸೋನಭದ್ರ ಜಿಲ್ಲೆಯ ಬ್ರಹ್ಮನಗರದಲ್ಲಿ ನಡೆದಿದೆ.
ಮದುವೆ ವರ ಮನೀಶ್ ಮಧೇಶಿಯಾ ಹಾರಿಸಿದ ಗುಂಡಿಗೆ ಆತನ‌ ಸ್ನೇಹಿತ ಬಾಬು ಲಾಲ್ ಯಾದವ್ ಮೃತಪಟ್ಟಿದ್ದಾನೆ.
ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ಈತನನ್ನು ಕುದುರೆ ಮೇಲೆ ಮರೆವಣಿಗೆ ಮಾಡಿದ್ದರು. ಆ ಸಂದರ್ಭದಲ್ಲಿ ಸುತ್ತಲೂ ಜನರು ಕೂಡಿಕೊಂಡಿದ್ದರು.
ಖುಷಿಯಿಂದ ಸಂಭ್ರಮಿಸುತ್ತಿದ್ದ ವರ ಮನೀಶ್ ಮಧೇಶಿಯಾ ತನ್ನ ಬಳಿ ಇದ್ದ ಸ್ನೇಹಿತ ಯಾದವ್‍ ಅವರ ಗನ್‍ನ್ನು ತೆಗೆದು ಗುಂಡು ಹಾರಿಸಿದ್ದಾನೆ. ಅಲ್ಲೇ ಇದ್ದ ಬಾಬು ಲಾಲ್ ಯಾದವ್‍ಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.
ಬಾಬು ಲಾಲಾ ಯಾದವ್ ಯೋಧರಾಗಿದ್ದರು. ಈ ಘಟನೆ ಸಂಬಂಧಿಸಿದಂತೆ ಕ್ಯಾಮರಾದಲ್ಲಿ ದಾಖಲಾಗಿದೆ.
ತಕ್ಷಣ ಯಾದವ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಯಾದವ್ ಕುಟುಂಬ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮನೀಶ್‍ನನ್ನು ಬಂಧಿಸಿದ್ದಾರೆ ಹಾಗೂ ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನು ವಶ ಪಡಿಸಿಕೊಂಡಿದ್ದಾರೆ.