ಮದುವೆ ನಿಶ್ವಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ

ಪುತ್ತೂರು, ಜೂ.೯- ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ಕುಳದಪಾರೆ ಸಮೀಪದ ಬದಿಯಡ್ಕ ನಿವಾಸಿಯಾದ ಸುಬ್ಬಣ್ಣ ನಾಯ್ಕರ ಪುತ್ರಿ ಪ್ರಿಯಾ(೨೫) ಜೂ.೬ ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಾ ಅವರಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮೇ ತಿಂಗಳಲ್ಲಿ ನಡೆಯಬೇಕಿದ್ದ ವಿವಾಹವು ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ತಾಯಿ ಬೀಡಿ ಬ್ರೆಂಚ್‌ಗೆ ತೆರಳಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರಿಯಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬಡಗನ್ನೂರು ಸರ್ಕಾರಿ ಹಿರಿಯ ಶಾಲೆಯಲ್ಲಿ ಕೆಲಕಾಲ ಗೌರವ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. ನಂತರ ಈಶ್ವರಮಂಗಲ ಜೆರಾಕ್ಸ್ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.