ಮದ್ಯ ತಯಾರಿಕಾ ಘಟಕದಲ್ಲಿ ಇಬ್ಬರ ಶವ ಪತ್ತೆ

ಗ್ರೇಟರ್ ನೋಯ್ದಾ, ಜ ೧೧-ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಕಸ್ನಾ ಪ್ರದೇಶದಲ್ಲಿರುವ ಅಕ್ರಮ ಮದ್ಯ ತಯಾರಿಕಾ ಕಾರ್ಖಾನೆಯಲ್ಲಿ ಇಬ್ಬರ ಮೃತದೇಹಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಕಲಿ ಮದ್ಯ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಡಿಸಿಪಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ನಕಲಿ ಮದ್ಯ ತಯಾರಿಕೆಯ ಬಗ್ಗೆ ಅಬಕಾರಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಕಾಳೂ ಎಂಬ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದಾಗ ೪-೫ ದಿನಗಳ ಹಿಂದೆ ಈ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾನೆ. ಈ ಘಟಕದಲ್ಲಿ ಭಾರಿ ಪ್ರಮಾಣದಲ್ಲಿ ನಕಲಿ ಮದ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ರತ ಪರೀಕ್ಷೆಗೆ ಒಪ್ಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.