ಮದ್ಯ ನೀತಿ ಪ್ರಕರಣ ಫಾರ್ಮಾ ಸಂಸ್ಥೆಯ ಮುಖ್ಯಸ್ಥ ಬಂಧನ

ನವದೆಹಲಿ, ನ.೧೦-:ದೆಹಲಿಯ ಮದ್ಯ ನೀತಿ ಪ್ರಕರಣ ಬಗೆದಷ್ಟು ಭ್ರಷ್ಟಾಚಾರ ಬಯಲಾಗುತ್ತಿದ್ದು ಹೈದರಾಬಾದ್ ಮೂಲದ ಪ್ರಮುಖ ಫಾರ್ಮಾ ಸಂಸ್ಥೆಯ ಮುಖ್ಯಸ್ಥನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಬಂಧನಕ್ಕೆ ಒಳಗಾದ ವ್ಯಕ್ತಿಯನ್ನು ಅರಬಿಂದೋ ಫಾರ್ಮಾದ ನಿರ್ದೇಶಕ ಶರತ್ ರೆಡ್ಡಿ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಂಸ್ಥೆಯಿಂದ ಬಂಧಿಸಲ್ಪಟ್ಟ ಎರಡನೇ ವ್ಯಕ್ತಿಯಾಗಿದ್ದಾರೆ.ರದ್ದಾದ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಅಕ್ರಮಗಳ ಹಣ ವರ್ಗಾವಣೆಯ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಲವು ಕಂಪನಿಗಳನ್ನು ವಿಚಾರಣೆಗೆ ಒಳಪಡಿಸಿತ್ತು
ಬಂಧಿತ ಶರತ್ ರೆಡ್ಡಿ ಅವರನ್ನು ತನಿಖಾ ಸಂಸ್ಥೆ ಈ ಹಿಂದೆ ಆತನ ಸಂಸ್ಥೆಯ ಮೇಲೆ ಎರಡು ಶೋಧ ನಡೆಸಿ ಎರಡು ಬಾರಿ ವಿಚಾರಣೆ ನಡೆಸಿತ್ತು.ಜಾರಿ ನಿರ್ದೇಶನಾಲಯ ಈ ಪ್ರಕರಣದಲ್ಲಿ ಇದುವರೆಗೆ ಹಲವು ದಾಳಿಗಳನ್ನು ನಡೆಸಿದೆ.
ಸೆಪ್ಟೆಂಬರ್‌ನಲ್ಲಿ, ಇಂಡೋಸ್ಪಿರಿಟ್ ಎಂಬ ಮದ್ಯ ತಯಾರಿಕಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧಿಸಲಾಯಿತು.
ದೆಹಲಿಯ ಅಬಕಾರಿ ನೀತಿ ೨೦೨೧-೨೨ರ ಅನುಷ್ಠಾನದಲ್ಲಿ ಆಪಾದಿತ ಅಕ್ರಮಗಳ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಅಬಕಾರಿ ಯೋಜನೆ ಅಕ್ರಮ ಭೇದಿಸುವ ಪ್ರಕ್ರಿಯೆ ಚುರುಕುಗೊಂಡಿದೆ.
ಲೆಫ್ಟಿನೆಂಟ್ ಗವರ್ನರ್ ಕೂಡ ೧೧ ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು. ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಹಲವು ಬಾರಿ ವಿಚಾರಣೆಗೆ ಒಳಪಡಿಸಲಾಗಿತ್ತು.