ಸೇಡಂ,ಜೂ,14: ನಗರ ಹಳ್ಳಿಗಳಲ್ಲಿನ ಯುವಕರು ಚಿಕ್ಕ ವಯಸ್ಸಿನಲ್ಲೇ ಮಧ್ಯಪಾನ ಸೇವಿಸಿ ಕುಟುಂಬದ ಮೇಲೆ ಕ್ಯಾಟ್ ಪರಿಣಾಮ ಬೀರುತ್ತದೆ ಆದರಿಂದ ಸೇಡಂ ತಾಲೂಕಾ ಮದ್ಯ ಮುಕ್ತ ತಾಲೂಕನ್ನಾಗಿ ಮಾಡಲು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಿದ್ದವಾಗಿದೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಅಭಿಪ್ರಾಯ ಪಟ್ಟರು.
ಪಟ್ಟಣದ ಚಿಂಚೋಳಿ ರಸ್ತೆಯಲ್ಲಿ ವೀರಶೈವ ಕಲ್ಯಾಣ ಮಂಟಪದಲ್ಲಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ 1667 ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಎಂಟು ದಿನಗಳಲ್ಲಿ ಮದ್ಯ ಮುಕ್ತ ಮನಸ್ಸಿನಿಂದ ಹೊರಬರುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಶಿವಶಂಕರ ಮಠದ ಪರಮ ಪೂಜ್ಯ ಶ್ರೀ ಶಿವಶಂಕರ ಶಿವಾಚಾರ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವೇಳೆಯಲ್ಲಿ ಪರಮ ಪೂಜ್ಯ ಶ್ರೀ ಪಂಚಾಕ್ಷರಿ ಸ್ವಾಮಿ ಶಿವಯ್ಯಸ್ವಾಮಿ ಬಿಬ್ಬಳ್ಳಿ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ಶಿವಶರಣ ಬಾಂಜಿ, ಬಸವಂತರಾವ್ ಸಾಹುಕಾರ, ವೀರಭದ್ರಯ್ಯ ಸ್ವಾಮಿ ರೂದನೂರ, ಶರಣಯ್ಯ ಸ್ವಾಮಿ ಕೊರಟಗಿ, ವಿಜಯಕುಮಾರ್ ರೆಡ್ಡಿ ಮಳಖೇಡ, ಮಾರುತಿರಾವ್, ಹಾಗೂ ಶಿಬಿರಗಳು ಸೇರಿದಂತೆ ಗ್ರಾಮಾಭಿವೃದ್ಧಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿ ಮಂಜುನಾಥ್ ಸ್ವಾಗತ ಭಾಷಣ ಮಾಡಿದರು.