ಮದ್ಯ ವ್ಯಸನದಿಂದ ಸಮಾಜದ ಸ್ವಾಸ್ಥ್ಯ ಹಾಳು 

ಸಂಜೆವಾಣಿ ವಾರ್ತೆ

 ಸೊರಬ.ಜು.೧; ಸಮಾಜದ  ಸ್ವಾಸ್ಥ್ಯವನ್ನು ಹಾಳು ಮಾಡುತ್ತೀರುವ ಮದ್ಯ ಸೇವನೆಯಂತಹ ದುಶ್ಚಟಗಳಿಂದ ದೂರವಿದ್ದು ನೆಮ್ಮದಿಯ ಜೀವನ ನಡೆಸುವಂತಾಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯಂತ ಶ್ಲಾಘನೀಯವಾದುದು ಎಂದು ಜಡೆ ಸಂಸ್ಥಾನ ಮಠದ ಡಾ,ಮ,ನಿ,ಪ್ರ, ಮಹಾಂತ ಸ್ವಾಮೀಜಿ ಹೇಳಿದರು. ತಾಲೂಕಿನ  ಜಡೆ  ಶ್ರೀ ಸಿದ್ದವೃಷಬೇಂದ್ರ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೊರಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ,ಮದ್ಯ ವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಜಡೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ,ನವ ಜೀವನ ಸಮಿತಿ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 1674 ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ಮಾನವ ದುಶ್ಚಟಗಳಿಗೆ ಬಲಿಯಾಗಿ ತನ್ನ ಜೀವನವನ್ನು ಹಾಳು ಮಾಡಿಕೊಳ್ಳುವುದಲ್ಲದೆ ಕುಟುಂಬವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಮೂಲಕ ಶೋಚನೀಯ ಸ್ಥಿತಿ ಎದುರಿಸುವಂತಾಗಿದೆ, ಕುಟುಂಬಗಳನ್ನು ಸುರಕ್ಷಿಸ ಬೇಕೇಂಬ ಮಹಾದುದ್ಧೇಶದಿಂದ ಹಾಗೂ ಮಧ್ಯ ವ್ಯಸನಕ್ಕೆ ಬಲಿಯಾದವರನ್ನು ಮನಃಪರಿವರ್ತನೆ ಮಾಡಿ ದುಶ್ಚಟಗಳಿಂದ ದೂರವಿಡಲು ಮತ್ತು ಕುಟುಂಬದೊಂದಿಗೆ ನೆಮ್ಮದಿಯ ಜೀವನ ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿ ಬದುಕಲು ಪರಮಪೂಜ್ಯ ಡಾ, ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಇಂತಹ ಕಾರ್ಯಕ್ರಮ ಚಟುವಟಿಕೆಗಳನ್ನು ಹಮ್ಮಿಕೊಂಡಿರುವುದು ಅತ್ಯಂತ ಶ್ಲಾಘನೀಯವಾದುದು ಎಂದರು.