ಮದ್ರಾಸ್ ಐ ವೈರಾಣು ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗೃತಿ

ದಾವಣಗೆರೆ; ಜು.28 : ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಕಣ್ಣಿನ ಸಮಸ್ಯೆಗೆ ಕಾರಣಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಕುರಿತು ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ತಿಳಿಸಿದರು.ಕಕ್ಕರಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಮದ್ರಾಸ್ ಐ ರೋಗದ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮವುಂಟು ಮಾಡುತ್ತಿದ್ದು ಸಾರ್ವಜನಿಕರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರುಮದ್ರಾಸ್ ಐ ಮನುಷ್ಯನ ಕಣ್ಣಿನ ಬಿಳಿ ಭಾಗವು ಕೆಂಪಾಗಿಸುತ್ತದೆ. ಕಣ್ಣುಗಳಲ್ಲಿ ಉರಿ, ನೋವುಉಂಟಾಗಿ,  ಕಣ್ಣುಗಳಿಂದ ನಿರಂತರವಾಗಿ ನೀರು ಹೊರಬರುವುದು ಹಾಗೂ ಕಣ್ಣು ಊದಿಕೊಂಡಂತಾಗುತ್ತವೆ.ವೈರಾಣು ಬಾರದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳೆಂದರೆ, ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು. ಪದೇ ಪದೇ ಕಣ್ಣುಗಳನ್ನು ಮುಟ್ಟಿಕೊಳ್ಳಬಾರದು ಹಾಗೂ  ಆಗಾಗ ಸೋಪಿನಿಂದ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು. ವೈರಾಣು ತಗುಲಿ ಕಣ್ಣಿನ ಉರಿ ಊತ ಬಂದ ವ್ಯಕ್ತಿ ಜೊತೆ ನಿಕ್ಕಟ ಸಂಪರ್ಕ ಹೊಂದುವುದನ್ನು ಹಾಗೂ ಅವರು ಉಪಯೋಗಿಸಿದ ಟಾವೆಲ್, ತಲೆದಿಂಬನ್ನು ಇತರರು ಉಪಯೋಗಿಸದಂತೆ ನೋಡಿಕೊಳ್ಳಬೇಕು. ಎಂದರು.ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.