ಮಧ್ಯಂತರ ಜಾಮೀನಿಗೆ ಸಿಸೋಡಿಯಾ ಅರ್ಜಿ

ನವದೆಹಲಿ,ಮೇ.೩- ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಪತ್ನಿಯ ಆರೋಗ್ಯದ ವೈದ್ಯಕೀಯ ಕಾರಣ ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜಾಮೀನು ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ರದ್ದಾದ ದೆಹಲಿ ಅಬಕಾರಿ ನೀತಿ ೨೦೨೧-೨೨ ರ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮತ್ತು ಗಳಿಸಿದ ಹಣವನ್ನು ಲಾಂಡರಿಂಗ್ ಮಾಡಿದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲ ಸಿಸೋಡಿಯಾ ಅವರನ್ನು ಬಂಧಿಸಿವೆ.

ಹಲವು ಬಾರಿ ಮನೀಶ್ ಸಿಸೋಡಿಯ ಜಾಮೀನು ಸಲ್ಲಿಸಿದ್ದರೂ ನ್ಯಾಯಾಲಯ ಅರ್ಜಿಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಪತ್ನಿಯ ವೈದ್ಯಕೀಯ ಕಾರಣ ಮುಂದೊಡ್ಡಿ ಇದೀಗ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಗೆ ಮನೀಶ್ ಸಿಸೋಡಿಯಾ ಅರ್ಜಿ ಸಲ್ಲಿಸಿದ್ದಾರೆ.

ಮೇ.೮ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ ೮ ರವರೆಗೆ ವಿಸ್ತರಿಸಿದೆ.

ಏಪ್ರಿಲ್ ೨೮ ರಂದು, ನ್ಯಾಯಾಲಯ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಿಸಿತು, ಅವರ ವಿರುದ್ಧದ ಆಪಾದಿತ ಅಪರಾಧದಲ್ಲಿ ತೊಡಗಿಸಿಕೊಂಡಿರುವ ಮಾಹಿತಿ ಕಂಡು ಬಂದ ಹಿನ್ನೆಲೆಯಲ್ಲಿ ಜಾಮೀನು ನಿರಾಕರಿಸಲಾಗಿತ್ತು.

ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಪತ್ನಿ ಸೀಮಾ ಸಿಸೋಡಿಯಾ ಅವರನ್ನು ಏಪ್ರಿಲ್ ೨೫ ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ . ಆಕೆ ಆಟೋಇಮ್ಯೂನ್ ಡಿಸಾರ್ಡರ್ ನಿಂದ ಬಳಲುತ್ತಿದ್ದಾಳೆ. ಸಿಸೋಡಿಯಾ ಅವರ ಪತ್ನಿಯನ್ನು ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿದ್ದು,ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಲಾಗಿದೆ.

“ಆಕೆಗೆ ೨೦೦೦ ರಲ್ಲಿ ಮಲ್ಟಿಪಲ್ ಸ್ಕ್ಲೆರೋಸಿಸ್, ತೀವ್ರವಾದ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಗಿಧ.ಕಳೆದ ೨೩ ವರ್ಷಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಅದೇ ಚಿಕಿತ್ಸೆಗೆ ಒಳಗಾಗಿದ್ದಾರೆ. ರೋಗದ ಪರಿಣಾಮ ಸಮಯ ಮತ್ತು ಇತರ ಅಂಶಗಳೊಂದಿಗೆ ವೇಗಗೊಳ್ಳುತ್ತದೆ ಎಂದು ಸಾಮಾನ್ಯವಾಗಿ ಒಪ್ಪಿಕೊಳ್ಳಲಾಗಿದೆ. ಹೆಚ್ಚಿದ ದೈಹಿಕ ಮತ್ತು ಭಾವನಾತ್ಮಕ ಒತ್ತಡದಿಂದ ಈಗ ಹೆಚ್ಚಾಗಿದೆ ಎಂದು ಹೇಳಲಾಗಿದೆ.