ಮಧ್ಯಪ್ರದೇಶದಲ್ಲಿ ಇಂದಿನಿಂದ ಏ. ೧೨ ರವರೆಗೆ ಲಾಕ್‌ಡೌನ್ ಜಾರಿ


ಭೋಪಾಲ್, ಏ. ೮- ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ೬ ರಿಂದ ಸೋಮವಾರ ಬೆಳಿಗ್ಗೆ ೬ರ ತನಕ ನಗರ ಪ್ರದೇಶಗಳಲ್ಲಿ ೬೦ ಗಂಟೆಗಳ ಕಾಲ ಲಾಕ್ ಡೌನ್ ಜಾರಿಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರು, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಹೀಗಾಗಿ ನಗರದಲ್ಲಿ ವಾರಾಂತ್ಯದ ಲಾಕ್ ಡೌನ್ ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರ ಪ್ರದೇಶಗಳನ್ನು ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಜನರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ. ಸೋಂಕು ಇದೇ ರೀತಿ ಹೆಚ್ಚಾದರೆ ಮತ್ತು ಮಾರ್ಗಸೂಚಿಗಳನ್ನು ಪಾಲಿಸಲು ಜನರು ವಿಫಲವಾದರೆ, ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಇಂದು ಸಂಜೆ ೬ ರಿಂದ ಸೋಮವಾರ ಬೆಳಿಗ್ಗೆ ೬ ಗಂಟೆಯ ತನಕ ಅಗತ್ಯ ಸೇವೆಯನ್ನು ಹೊರತುಪಡಿಸಿ, ಸಂಪೂರ್ಣವಾಗಿ ಲೌಕ್ ಡೌನ್ ಮಾಡಲಾಗುವುದು ಎಂದು ಅವರು ತಿಳಿಸಿದರು.
ನಗರ ಪ್ರದೇಶಗಳಲ್ಲಿ ರಾತ್ರಿ ಲಾಕ್ ಡೌನ್ ಜಾರಿಯಲ್ಲಿರಲಿದೆ, ಯಾರೂ ಕೂಡ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಅವರು ತಿಳಿಸಿದ್ದಾರೆ.
ವಾರದಲ್ಲಿ ೫ ದಿನ ಕೆಲಸ
ಮಧ್ಯಪ್ರದೇಶದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲಯಲ್ಲಿ ವಾರದಲ್ಲಿ ೫ ದಿನಗಳು ಸಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ ಚೌಹಾಣ್ ಹೇಳಿದ್ದಾರೆ.
ಸೋಮವಾರದಿಂದ ಶುಕ್ರವಾರದವರೆಗೂ ಕಚೇರಿ ಕೆಲಸಗಳು ನಡೆಯಲಿವೆ ಎಂದು ಅವರು ತಿಳಿಸಿದ್ಸಾರೆ.
ಚಿಂದ್ವಾರ ಜಿಲ್ಲೆಯಲ್ಲಿ ಇಂದು ರಾತ್ರಿ ೮ ರಿಂದ ಮುಂದಿನ ೭ ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.