
ಕಲಬುರಗಿ,ಆ 6: ಕಲಬುರಗಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಾಮಾನ್ಯರ ಸಮಸ್ಯೆಗಳ ಬೇಡಿಕೆಯ ಮನವಿನ್ನು ಪಡೆಯದೇ ಜನರಿಗೆ ಮತ್ತು ಕನ್ನಡಪರ ಹೋರಾಟಗಾರಿಗೆ ಅವಮಾನ ಮಾಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದವರು ಆಕ್ರೋಶ ವ್ಯಕ್ತಪಡಿಸಿದರು.ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಜನಸಾಮಾನ್ಯರ ಸಮಸ್ಯೆಗಳನ್ನು ಮನವಿ ಪಡೆಯಲು ಮುಖ್ಯಮಂತ್ರಿಗಳಿಗೆ ದಾರಿ ತಪ್ಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಲವಾರಕರ್, ಕಾರ್ಯಾಧ್ಯಕ್ಷ ಸಚಿನ ಫರಹತಾಬಾದ,ಜಿಲ್ಲಾಧ್ಯಕ್ಷ ರವಿ ದೇಗಾಂವ,ಉಪಾಧ್ಯಕ್ಷ ವಿ.ಎಚ.ವಾಲಿಕಾರ,ಮನೋಹರ ಬೀರನೂರು,ಗೋಪಾಲ ನಾಟೀಕಾರ,ಶರಣು ಹೋಸಮನಿ ,ಆನಂದ ತೆಗನೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.