ಮನವಿ ಸಲ್ಲಿಕೆ

(ಸಂಜೆವಾಣಿ ವಾರ್ತೆ)
ಚನ್ನಮ್ಮನ ಕಿತ್ತೂರ,ಸೆ 30: ತೆಮಿಳನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕೆಂದು ನವಭಾರತ ಸೇನೆ ಜಿಲ್ಲಾಧ್ಯಕ್ಷ ಬಸವರಾಜ ಬೀಮರಾಣಿ ಹಾಗೂ ರಾಜ್ಯ ಸಂಚಾಲಕ ಜಗದೀಶ ಕಡೋಲಿ ಹೇಳಿದರು.
ತಾಲೂಕಾಡಳಿತ ಸೌಧದಲ್ಲಿ ತಹಶೀಲ್ದಾರ ರವೀಂದ್ರ ಹಾದಿಮನಿ ಇವರಿಗೆ ಮನವಿ ಸಲ್ಲಿಸಿ ಮಾತನಾಡಿ, ರಾಜ್ಯದಲ್ಲಿ ಬರಗಾಲವಿದ್ದು ಕುಡಿಯುವ ನೀರು ಮತ್ತು ರೈತರ ಬೆಳೆಗಳಿಗೆ ನೀರಿಲ್ಲದ ಪರಿಸ್ಥಿತಿಯಲ್ಲಿ ತಮಿಳನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ. ರಾಜ್ಯ ರೈತರ ಹಿತ ಕಾಪಾಡುವ ಜೊತೆಗೆ ಕುಡಿಯುವ ನೀರಿನ ಹಾಗೂ ಬರ ಪರಿಸ್ಥಿತಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟಿಗೆ ತಿಳಿಸುವಲ್ಲಿ ಸರ್ಕಾರ ವಿಫಲವಾಗಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು.