ಮನೆಗಳ್ಳನ ಬಂಧನ ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ*

ಶಿವಮೊಗ್ಗ, ಡಿ. 26 : ಜಿಲ್ಲೆಯ ಸಾಗರ ಗ್ರಾಮಾಂತರ ಹಾಗೂ ಹೊಳೆಹೊನ್ನೂರು ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.ಶಿವಮೊಗ್ಗದ ಅಣ್ಣಾನಗರದ ತಬ್ರೇಜ್ ಯಾನೆ ಬಚ್ಚಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನ ಬಂಧನದಿಂದ ಸಾಗರ ಗ್ರಾಮಾಂತರ ಹಾಗೂ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಗಳಲ್ಲಿ ದಾಖಲಾಗಿದ್ದ 3 ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.ಆರೋಪಿಯಿಂದ 2.76 ಲಕ್ಷ ರೂ. ಮೌಲ್ಯದ ಒಟ್ಟು 45 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ 600 ಗ್ರಾಂ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.