ಮನೆಗೆ ಅಕಸ್ಮಿಕ ಬೆಂಕಿ:5 ಲಕ್ಷ ರೂ.ವಸ್ತು ಭಸ್ಮ

ವಿಜಯಪುರ:ಮಾ.7: ಆಕಸ್ಮಿಕವಾಗಿ ಶಾರ್ಟ್ ಸಕ್ರ್ಯೂಟ್‍ನಿಂದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕ ಸಿಂದಗಿ ಗ್ರಾಮದಲ್ಲಿ ಸಂಭವಿಸಿದೆ.
ಸುಭಾಷ್ ಭಾಸಗಿ ಎಂಬುವರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ನಡೆದಿದ್ದು, ಸುಮಾರು 5 ಲಕ್ಷ ಮೌಲ್ಯದ ವಿವಿಧ ವಸ್ತುಗಳು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಸಿಂದಗಿ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದರು. ಸಿಂದಗಿ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.