ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಕಾರ್ಕಳ, ಮಾ.೨೨- ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರದ ಸಂದೀಪ್ ಜೈನ್ ಎಂಬವರ ಮನೆಗೆ ನುಗ್ಗಿ ಸುಮಾರು ೧೫ ಲಕ್ಷ ರೂ. ಮೌಲ್ಯದ ೫೫ ಪವನ್ ಚಿನ್ನಾಭರಣ ಹಾಗೂ ೬೦ ಸಾವಿರ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಮನೆ ಮಂದಿ ಕುಟುಂಬದ ಮನೆಯಲ್ಲಿ ನಡೆಯುತ್ತಿದ್ದ ಕೋಲದಲ್ಲಿ ಪಾಲ್ಗೊಳ್ಳಲು ತೆರಳಿದ್ದ ವೇಳೆ ಕಳ್ಳತನ ನಡೆದಿದೆ. ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸಂಪತ್ ಕುಮಾರ್, ನಗರ ಠಾಣೆ ಎಸ್‌ಐ ಮಧು ಬಿ.ಇ. ಗ್ರಾಮಾಂತರ ಠಾಣೆ ಎಸ್‌ಐ ತೇಜಸ್ವಿ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿರುತ್ತಾರೆ.