ಮನೆಗೆ ಬೆಂಕಿ: ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ

ವಿಜಯಪುರ,ಜ.12-ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಬಲೇಶ್ವರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋದ ಘಟನೆ ನಡೆದಿದೆ.
ಶಂಕ್ರಮ್ಮ ಸುರಗಹಳ್ಳಿ ಅವರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 1ಲಕ್ಷ ನಗದು ಹಣ ಹಾಗೂ ಬಂಗಾರದ ಆಭರಣ, ಸೇರಿದಂತೆ ಕೋಳಿ, ಕುರಿ, ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ. ಸುದ್ದಿ ತಿಳಿದಿ ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಆಲಮೇಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.