ಮನೆಗೆ ಬೆಂಕಿ:4 ದನಗಳು ಸಾವು, ಆಸ್ತಿ ಹಾನಿ

ಧಾರವಾಡ,ಡಿ23: ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ನಾಲ್ಕು ದನಗಳು ಸಾವನ್ನಪ್ಪಿದ ಘಟನೆ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಗ್ರಾಮದ ಹೊರವಲಯದಲ್ಲಿರುವ ಚೆನ್ನಬಸಪ್ಪ ಹನಿ ಎಂಬುವವರ ಮನೆಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ನಾಲ್ಕು ದನಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಹತ್ತಿ ಹಾಗೂ ದವಸಧಾನ್ಯಗಳು ಸುಟ್ಟು ಕರಕಲಾಗಿವೆ.
ಘಟನೆಯ ಸುದ್ದಿ ತಲುಪಿದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಳಿದುಳಿದ ವಸ್ತುಗಳನ್ನು ಸಂರಕ್ಷಣೆ ಮಾಡಲು ಹರಸಾಹಸ ಪಡುವಂತಾಯಿತು. ಆದರೆ, ದನಗಳನ್ನ ಉಳಿಸಿಕೊಳ್ಳಲು ಆಗಲಿಲ್ಲ.
ಘಟನೆಯಿಂದಾಗಿ ಮನೆಯ ಮಾಲೀಕರ ಆಕ್ರಂದನ ಮುಗಿಲು ಮುಟ್ಟಿತ್ತು.
ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಚುನಾವಣೆಯಲ್ಲಿನ ವೈಷಮ್ಯದಿಂದಾಗಿ ಮನೆ ಬೆಂಕಿ ಹಚ್ಚಿರಬಹುರು ಎಂದು ಹೇಳಲಾಗುತ್ತಿದೆ. ಗ್ರಾಮೀಣ ಠಾಣೆ ಪೆÇಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.