ಮನೆಯಲ್ಲೇ ಸಿದ್ದು ವಿಶ್ರಾಂತಿ

ಬೆಂಗಳೂರು,ಜೂ. ೧- ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಅವರು ನಿನ್ನೆ ರಾತ್ರಿಯಿಂದಲೇ ಸಿದ್ದರಾಮಯ್ಯನವರು ಜ್ವರದಿಂದ ಬಳಲುತ್ತಿದ್ದು, ೨ ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದು, ಅದರಂತೆ ಸಿದ್ದರಾಮಯ್ಯ ಅವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೊರೊನಾ ಸೋಂಕು ಪರೀಕ್ಷೆಗೂ ಒಳಗಾಗಿದ್ದು, ಪರೀಕ್ಷಾ ವರದಿ ನೆಗೆಟೀವ್ ಬಂದಿದೆ ಎಂದು ಹೇಳಲಾಗಿದೆ.