ಚಿತ್ರದುರ್ಗ.ಏ.29; ಮನೆಯ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು. ಇದು ಮಲೇರಿಯಾ ಹರಡುವುದನ್ನು ನಿಯಂತ್ರಿಸಲು ಸಹಕರಿಯಾಗಲಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಮಂಗಳವಾರ ಚಿತ್ರದುರ್ಗ ತಾಲ್ಲೂಕಿನ ಅಳಗವಾಡಿ ಗ್ರಾಮದ ಆಯುಷ್ ಚಿಕಿತ್ಸಾಲಯದ ಆವರಣದಲ್ಲಿ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೋವಿಡ್ ಸಾಂಕ್ರಮಿಕ ರೋಗದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಲೇರಿಯಾ ಕುರಿತು ಜಾಗೃತಿ ಮೂಡಿಸುವಲ್ಲಿ ತೊಂದರೆ ಉಂಟಾಯಿತು. ಇದರಿಂದಾಗಿ ವಿಶ್ವದಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇದು ಕಳವಳಕಾರಿ ಸಂಗಿತಿಯಾಗಿದೆ ಎಂದರು.