ಮನೆ ಕಳ್ಳನ ಬಂಧನ: 2.40 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

ಕಲಬುರಗಿ,ಮೇ.28-ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ವಿಶ್ವವಿದ್ಯಾಲಯ ಪೊಲೀಸರು 2.40 ಲಕ್ಷ ರೂ.ಮೌಲ್ಯದ ಬಂಗಾರದ ಆಭರಣ ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರದ ಪರಬಾಣಿ ಜಿಲ್ಲೆಯ ಖಯ್ಯುಮ್ ಅಲಿಯಾಸ್ ನಯ್ಯುಮ್ ತಂದೆ ರಫಿಕ್ (20) ಬಂಧಿತ ಆರೋಪಿ.
ಮನೆ ಕಳ್ಳತನ ಮಾಡುತ್ತಿದ್ದ ಈತನನ್ನು ಬಂಧಿಸಲು ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಉಪ ಪೊಲೀಸ್ ಆಯುಕ್ತರಾದ ಅಡ್ಡೂರು ಶ್ರೀನಿವಾಸಲು, ಐ.ಎ.ಚಂದ್ರಪ್ಪ, ಸಬ್ ಅರ್ಬನ್ ಉಪ ವಿಭಾಗದ ಎಸಿಪಿ ಗೀತಾ ಬೇನಾಳ ಅವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಪಿಐ ಸತೀಶ ಎನ್.ಕಣಿಮೇಶ್ವರ, ಸಿಬ್ಬಂದಿಗಳಾದ ರಾಜು ಟಕಾಳೆ ಪ್ರಭಾಕರ, ವಿಶ್ವನಾಥ, ಪ್ರಕಾಶ, ಮಂಜುನಾಥ, ಸುಲ್ತಾನ್ ಅವರನ್ನೊಳಗೊಂಡ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಈ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಉಪ ಪೊಲೀಸ್ ಆಯುಕ್ತರಾದ ಅಡ್ಡೂರು ಶ್ರೀನಿವಾಸಲು, ಐ.ಎ.ಚಂದ್ರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.