ಮನೆ ದೇವರು ಕೇತಕಿ ಸಂಗಮೇಶ್ವರ್ ಹೇಸರಿನಲ್ಲಿಪ್ರಮಾಣ ವಚನ ಸ್ವೀಕರಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬೀದರ್,ಮೇ.23- ಬೆಂಗಳೂರು ನಲ್ಲಿ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕರ ಸಮಾರಂಭದಲ್ಲಿ ಬೀದರ ದಕ್ಷಿಣ ಮತಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ದೇವರ ಹೆಸರಲ್ಲಿ, ಮನೆ ದೇವರು ಕೇತಕಿ ಸಂಗಮೇಶ್ವರ್, ತಂದೆ ತಾಯಿ, ಕ್ಷೇತ್ರದ ಮತದಾರರ ಹೇಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದ್ದರು.
ವಿಧಾನಸಭೆ ಚುನಾವಣೆಯಲ್ಲಿ ಮೊದಲಬಾರಿ ಬೀದರ್ ದಕ್ಷಿಣ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಧಾನಸಭೆಗೆ ಪ್ರವೇಶಿಸುವ ಮುನ್ನ ದ್ವಾರಕ್ಕೆ ನಮಸ್ಕರಿಸಿ ವಿಧಾಸಭೆಯಲ್ಲಿ ಭಾಗವಹಿಸಿದ್ದರು.
ಮೊದಲ ಬಾರಿಗೆ ವಿಧಾನಸಭೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ ಬೀದರ್ ದಕ್ಷಿಣ ಕ್ಷೇತ್ರದ ಮತದಾರರಿಗೆ, ಪಕ್ಷದ ಮುಖಂಡರಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ದುಡಿದು ಕ್ಷೇತ್ರ ಅಭಿವೃದ್ಧಿ ಪಡಿಸುವೆ ಎಂದರು.