ಮನೆ ಬೀಗ ಮುರಿದು 1 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಕಲಬುರಗಿ,ಜೂ.29-ಮನೆ ಬೀಗ ಮುರಿದು 1 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿಕೊಂಡು ಹೋದ ಘಟನೆ ಇಲ್ಲಿನ ಶಿವಲಿಂಗೇಶ್ವರ ಕಾಲೋನಿಯಲ್ಲಿ ನಡೆದಿದೆ.
ಭೀಮಾಶಂಕರ ಬಳಗಾನೂರ ಎಂಬುವವರ ಮನೆ ಬೀಗ ಮುರಿದು 50 ಸಾವಿರ ರೂ.ಮೌಲ್ಯದ 10 ಗ್ರಾಂ.ಬಂಗಾರದ ಲಾಕೇಟ್, 25 ಸಾವಿರ ರೂ.ಮೌಲ್ಯದ 5 ಗ್ರಾಂ.ಬಂಗಾರದ ಕಿವಿಯೋಲೆ, 25 ಸಾವಿರ ರೂ.ಮೌಲ್ಯದ 5 ಗ್ರಾಂ.ಬಂಗಾರದ ಹರಳಿನ ಉಂಗುರ ಕಳವು ಮಾಡಲಾಗಿದೆ.
ಭೀಮಾಶಂಕರ ಅವರು ಮನೆಗೆ ಬೀಗ ಹಾಕಿಕೊಂಡು ಪತ್ನಿ ಜೊತೆಗೆ ಶಹಾಬಜಾರದಲ್ಲಿರುವ ತಮ್ಮ ತಂದೆ-ತಾಯಿಯ ಮನೆಗೆ ಬೆಳಿಗ್ಗೆ ಹೋಗಿ ಸಾಯಂಕಾಲ ಮರಳಿ ಮನೆಗೆ ಬರುವುದರೊಳಗೆ ಕಳ್ಳರು ಮನೆ ಬೀಗ ಮುರಿದು ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.