ಮನೆ ಮನೆಗೆ ಗ್ಯಾರೆಂಟಿ ಕಾರ್ಡ್ ವಿತರಿಸಿದ ಶಾಸಕ ದದ್ದಲ್

ರಾಯಚೂರು,ಮಾ.೦೭- ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮಗಳಿಗೆ, ಮನೆ ಮನೆಗೆ ಗ್ಯಾರೆಂಟಿ ಕಾರ್ಡ್ ಮುಟ್ಟಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಸನಗೌಡ ದದ್ದಲ್‌ರವರು
೨೦೨೩ ಕ್ಕೆ ಕಾಂಗ್ರೆಸ್ ಪಕ್ಷ ಸ್ಪಷ್ಟವಾದ ಬಹುಮತದ ಮೂಲಕ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ರಚನೆ ಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಗ್ಯಾರೆಂಟಿ ಕಾರ್ಡ್ ಮೂಲಕ ಪ್ರತಿ ಕುಟುಂಬಕ್ಕೆ ಮುಖ್ಯಸ್ಥರಿಗೆ
೧.ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ೨೦೦೦ ರೂಪಾಯಿ
೨. ಗೃಹ ಜ್ಯೋತಿ ಯೋಜನೆ ಮೂಲಕ ೨೦೦ ಯೂನೀಟ್ ಉಚಿತ ವಿದ್ಯುತ್ ಮತ್ತು
೩. ಪ್ರತಿ ತಿಂಗಳು ೧೦ ಕೆಜಿ ಉಚಿತ ಅಕ್ಕಿ ಕಾಂಗ್ರೆಸ್ ಗ್ಯಾರೆಂಟಿ* ಕಾರ್ಡ್ ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಂದು ಮನೆಗೂ ಕಾರ್ಡ್ ಹಂಚುವ ಕೆಲಸ ಮಾಡಲಾಗುತ್ತಿದೆ. ಹೀಗಾಗಲೇ ಬೂತ್‌ಮಟ್ಟದ ಮುಖಂಡರುಗಳ ಸಭೆ ಕರೆದು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮತ್ತು ಗ್ಯಾರೆಂಟಿ ಕಾರ್ಡ್‌ನ್ನು ಪ್ರತಿಯೊಬ್ಬರಿಗೆ ತಲುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಸದಸ್ಯರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗಳು, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.