ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕಾಕರಣ ಮಾಡಿ-ಜಿಲ್ಲಾಧಿಕಾರಿ ಟಿ.ವೆಂಕಟೇಶ್

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೨೩; ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ 30 ರವರೆಗೆ 5ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದೆ. ವ್ಯಾಪಕ ಪ್ರಚಾರದೊಂದಿಗೆ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕಾಕರಣ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.ಈ ಕುರಿತು  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.ಬೇಸಿಗೆ ಸಂದರ್ಭವಾಗಿರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಬೇರೆ ರೋಗ ಲಕ್ಷಣಗಳು ಕಂಡುಬಂದರೆ ಚಿಕಿತ್ಸೆ ನೀಡಬೇಕು. ಸಾಂಕ್ರಾಮಿಕ ರೋಗಗಳು ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಬೇಕು. ಯಾವುದೇ ಜಾನುವಾರುಗಳು ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು. ಶೇ.100 ರಷ್ಟು ಲಸಿಕಾಕರಣ ಗುರಿ ತಲುಪಬೇಕು. ಲಸಿಕೆ ನೀಡಿದ ಪ್ರತಿ ಜಾನುವಾರು ಮಾಹಿತಿಯನ್ನು ತಪ್ಪದೇ ತಂತ್ರಾಂಶದಲ್ಲಿ ವರದಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ಜಾನುವಾರುಗಳ ನಿಖರ ಅಂಕಿ ಅಂಶಗಳ ಕ್ರೂಢಿಕರಣಕ್ಕೆ ವಾರದ ಗಡುವು: ಜಿಲ್ಲೆಯ ಜಾನುವಾರುಗಳ ಸಂಖ್ಯೆ ಎಷ್ಟು? ಸುಸ್ಥಿಯಲ್ಲಿರುವ ಬೋರ್‍ವೆಲ್‍ಗಳ ಸಂಖ್ಯೆ ಎಷ್ಟು? ಎಷ್ಟು ಟನ್ ಹಸಿರು ಮೇವು ಉತ್ಪಾದನೆಯಾಗುತ್ತಿದೆ? ಎಷ್ಟು ರೈತರು ಹಸಿರು ಮೇವು ಬೆಳೆಯುತ್ತಿದ್ದಾರೆ? ಯಾವ ಪ್ರದೇಶಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ಅವಶ್ಯಕತೆ ಇದೆ? ಈಗ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯಲ್ಲಿ ಆಶ್ರಯ ಪಡೆಯುತ್ತಿರುವ ಜಾನುವಾರುಗಳ ಸಂಖ್ಯೆ ಎಷ್ಟು? ಸ್ವತಃ ಮಾಲೀಕರೇ ಮೇವು ಒದಗಿಸುತ್ತಿರುವ ಜಾನುವಾರುಗಳ ಸಂಖ್ಯೆ ಎಷ್ಟು? ವಲಸೆ ಹೋದ ಕುರಿ ಹಾಗೂ ಮೇಕೆ ಸಂಖ್ಯೆ ಎಷ್ಟು? ಎಂಬ ತಾಲ್ಲೂಕುವಾರು ನಿಖರ ಮಾತಿಯನ್ನು ಸಂಗ್ರಹಿಸಿ ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪಶು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ತೀವ್ರ ಬರಗಾಲದ ಹಿನ್ನಲೆಯಲ್ಲಿ 2018-19 ಸಾಲಿನ ಜಾನುವಾರು ಗಣತಿ ಆಧಾರಿಸಿ ಜಿಲ್ಲೆಯಲ್ಲಿ ಗೋಶಾಲೆಗಳು ಹಾಗೂ ಮೇವು ಬ್ಯಾಂಕುಗಳನ್ನು ತರೆಯಲಾಗಿದೆ ಇವುಗಳು ಸದ್ಬಳಕೆಯಾಗಬೇಕು. ನಾಮಕಾವಸ್ಥೆಗೆ ಗೋಶಾಲೆಗಳನ್ನು ತೆರೆಯುವಂತಾಗಬಾರದು. ಯಾವ ಸ್ಥಳಗಳಲ್ಲಿ ಗೋಶಾಲೆಗಳ ಅಗತ್ಯ ಇಲ್ಲವೋ ಅಲ್ಲಿ ಮೇವು ಬ್ಯಾಂಕ್ ತೆರೆಯಬೇಕು.ಗೋಶಾಲೆಗಳಲ್ಲಿ ತಾತ್ಕಾಲಿಕ ಚಪ್ಪರ ಹಾಕಿ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.