ಮನೆ ಮನೆಗೆ ತೆರಳಿ ರ್ಯಾಟ್ ಮಾಡಲು ಪಿ.ರವಿಕುಮಾರ್ ಸೂಚನೆ


ಬೆಳಗಾವಿ, ಮೇ 20: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮನೆ ಮನೆಗೆ ತೆರಳಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (ರ್ಯಾಟ್) ಮಾಡುವ ಮೂಲಕ ಸೋಂಕಿತರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪ್ರವಾಸಿಮಂದಿರದಲ್ಲಿಂದು ನಡೆದ ಜಿಲ್ಲೆಯ ಉನ್ನತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರ್ಯಾಟ್ ಕಿಟ್ ಈಗ ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಸೋಂಕು ಪತ್ತೆ ಮಾಡಬೇಕು.
ಶೇ.30 ರಷ್ಟು ರ್ಯಾಟ್ ಮಾಡಬೇಕು ಎಂದು ಕೇಂದ್ರ ಸರಕಾರ ತಿಳಿಸಿದೆ. ಆದಾಗ್ಯೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರ್ಯಾಟ್ ಪ್ರಮಾಣ ಕಡಿಮೆಯಿದೆ ಎಂದು ಹೇಳಿದರು.
ರ್ಯಾಟ್ ವಿಧಾನ ಮೂಲಕ ಕೋವಿಡ್ ತಪಾಸಣೆ ಹೆಚ್ಚಿಸದೇ ಹೊರತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರನ್ನು ಪತ್ತೆ ಮಾಡುವುದು ತುಂಬಾ ಕಷ್ಟಕರ. ರ್ಯಾಟ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟರೆ ಸಾಕು; ಒಂದು ವೇಳೆ ಲಕ್ಷಣಗಳಿದ್ದೂ ರ್ಯಾಟ್ ನಲ್ಲಿ ನೆಗೆಟಿವ್ ಬಂದಾಗ ಮಾತ್ರ ಆರ್.ಟಿ.ಪಿ.ಸಿ.ಆರ್. ಮತ್ತಿತರ ಪರೀಕ್ಷೆ ಮಾಡಬೇಕು ಎಂದು ಸೂಚನೆ ನೀಡಿದರು.
ಸರಿಯಾದ ವಿಳಾಸ-ದೂರವಾಣಿ ಸಂಖ್ಯೆ ಸಂಗ್ರಹಿಸಲು ಸೂಚನೆ:
ಮಾದರಿ ಸಂಗ್ರಹಿಸುವ ಸಂದರ್ಭದಲ್ಲಿ ಸರಿಯಾದ ವಿಳಾಸವನ್ನು ಪಡೆದುಕೊಳ್ಳಬೇಕು. ತಪ್ಪು ವಿಳಾಸ ನೀಡುತ್ತಿರುವುದರಿಂದ ಕೋವಿಡ್ ತಪಾಸಣೆ ಉದ್ಧೇಶ ಈಡೇರುತ್ತಿಲ್ಲ. ತಪ್ಪು ವಿಳಾಸದಿಂದ ಸೋಂಕಿತರ ಚಿಕಿತ್ಸೆ ಹಾಗೂ ಐಸೋಲೇಷನ್ ಎರಡೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪರ್ಯಾಯ ದೂರವಾಣಿ ಸಂಖ್ಯೆ ಪಡೆಯಲು ನಿರ್ದೇಶನ ನೀಡಿದರು.
ಹೋಮ್ ಐಸೋಲೇಷನ್ ನಲ್ಲಿ ಇರುವವರ ಮೇಲೆ ವಾರ್ ರೂಮ್ ಮೂಲಕ ನಿರಂತರ ನಿಗಾ ವಹಿಸಬೇಕು. ಸೋಂಕು ದೃಢಪಟ್ಟ ತಕ್ಷಣವೇ ಅಗತ್ಯ ಔಷಧಿ ಕಿಟ್ ನೀಡಬೇಕು. ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಟೆಸ್ಟಿಂಗ್ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಹೋಮ್ ಐಸೋಲೇಷನ್ ಗೆ ಆದ್ಯತೆ ನೀಡದೇ ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಿಗೆ ಸೋಂಕಿತರನ್ನು ದಾಖಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಬೇಕು. ಪೆÇಲೀಸ್ ಸಿಬ್ಬಂದಿಗೆ ಪ್ರತ್ಯೇಕವಾಗಿ ಕೇಂದ್ರವನ್ನು ಆರಂಭಿಸಬೇಕು.ವೈದ್ಯರು ಸೇರಿದಂತೆ ಯಾವುದೇ ರೀತಿಯ ವೈದ್ಯಕೀಯ ಸಿಬ್ಬಂದಿ ಅಗತ್ಯವಿದ್ದರೆ ತಕ್ಷಣವೇ ನೇಮಕಾತಿ ನಡೆಸಬೇಕು. ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸರಕಾರಿ ಕೋಟಾದ ಬೆಡ್ ಗಳನ್ನು ಜಿಲ್ಲಾಡಳಿತದಿಂದಲೇ ಹಂಚಿಕೆ ಮಾಡುವುದೇ ಸೂಕ್ತ. ಆದ್ದರಿಂದ ಸರಕಾರಿ ಕೋಟಾದ ಬೆಡ್ ಗಳನ್ನು ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ,ಬೆಳಗಾವಿ ನಗರ ಪೆÇಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಪಾಲಿಕೆಯ ಆಯುಕ್ತರಾದ ಜಗದೀಶ್, ವೈದ್ಯಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಂಣಣಚಿಛಿhmeಟಿಣs ಚಿಡಿeಚಿ