ಮನ್ನಾಖೇಳ್ಳಿ; ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ

ಚಿಟಗುಪ್ಪ:ಫೆ.14: ಭಾರತ ಸಂವಿಧಾನ ಅಂಗೀಕಾರಗೊಂಡು 75ನೇ ವರ್ಷಾಚರಣೆ ಅಂಗವಾಗಿ ರಾಜ್ಯಾದಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥ ತಾಲೂಕಿನ ಮನ್ನಾಖೇಳ್ಳಿ ಗ್ರಾಮಕ್ಕೆ ಸೋಮವಾರ ಸಾಯಂಕಾಲ ಆಗಮಿಸಿದಾಗ ಮನ್ನಾಖೇಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ರಾಜಕುಮಾರ್ ಅಗಸಿ ಅವರು ಡಾ.ಬಿ ಆರ್ ಅಂಬೇಡ್ಕರ ಪುಥಳಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ. ಮತ್ತು ಗ್ರಾಮ ಪಂಚಾಯತ ಸರ್ವಸದಸ್ಯರು, ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಗುರು ಹಿರಿಯರು, ವಿವಿಧ ಸಂಘಟನೆಯ ಅಧ್ಯಕ್ಷರು, ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೂಡಿ ಸಡಗರ ಸಂಭ್ರಮದಿಂದ ಸ್ವಾಗತ ಕೋರಿದರು.
ಶಾಲಾ ಮಕ್ಕಳು ವಿವಿಧ ಬಗೆಯ ವೇಷ ಭೂಷಣಗಳು ಜಾಥಾ ಮೆರವಣಿಗೆಗೆ ಮೆರಗು ತಂದು ಕೊಟ್ಟವು ಮಹಿಳಾ ತಾಯಿಯಂದಿಯರು ಕಳಸ ಹೆತ್ತಕೊಂಡರು ವಿವಿಧ ಸಂಘಟನೆಗಳ ಪ್ರಮುಖರು ಗ್ರಾಮಸ್ಥರು ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯಲ್ಲಿ ಭಾಗಿಯಾದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿತು.
ನಂತರ ಡಾ ಬಿ.ಆರ್. ಅಂಬೇಡ್ಕರ್ ವೃತ್ತದ ಆವರಣದಲ್ಲಿ ಜರುಗಿದ ಸಮಾರಂಭದಲ್ಲಿ ಪಿಡಿಓ ಭಾಗ್ಯಜ್ಯೋತಿ ಸಂವಿಧಾನ ಪೀಠಿಕೆ ಬೋಧಿಸಿದರು. ಶಿಕ್ಷಕರಾದ ಶಿವಕುಮಾರ ಅವರು ಸಂವಿದಾನದ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರವೀಂದ್ರ ದಾಮಾ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಅಕ್ರಂ ಪಾಶಾ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಲಿಂಗರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗುಡಾಳ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ಶಾಲೆಗಳ ಮುಖ್ಯೋಪಾಧ್ಯರು ಮತ್ತು ಶಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು, ಗ್ರಾಮ ಪಂಚಾಯತ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.