ಮನ್ಸಲಾಪೂರು ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಡಿಎಸ್ಎಸ್ ಆಗ್ರಹ 

ರಾಯಚೂರು, ಆ.01ಮನ್ಸಲಾಪೂರು ಗ್ರಾಮದಲ್ಲಿ ಕುಡಿಯುವ ನೀರು  ಮತ್ತು ಮೂಲಭೂತ ಸೌಕರ್ಯಗಳನ್ನು ಓದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮತಿ ಪದಾಧಿಕಾರಿಗಳು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕಧಿಕಾರಿಗಳಿಗೆ  ಮನವಿ ಸಲ್ಲಿಸಿ ಒತ್ತಾಯಸಿದರು.

 ತಾಲೂಕಿನ ಮನ್ನಲಾಪೂರು ಗ್ರಾಮ ಪಂಚಾಯತ್  ವ್ಯಾಪ್ತಿಯಲ್ಲಿ ಬರುವ ಮನ್ತಲಾಚೂರು ಗ್ರಾಮದಲ್ಲಿ ನೀರಿನ ಸಮಸ್ಯೆ ಮತ್ತು ಮೂಲಭೂತ ಸೌಕರ್ಯ  ಗ್ರಾಮದ ಪರಿಶಿಷ್ಟ ಜಾತಿ ಏರಿಯಾದಲ್ಲಿ  ಎಸ್.ಸಿ.ಓಣಿಯಲ್ಲ  ಇಲ್ಲದೇ ಸಾರ್ವಜನಿಕರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದ ದಲಿತರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅಧ್ಯಕ್ಷರಿಗೆ ಅನೇಕ ಭಾರಿ  ಮೌಖಿಕವಾಗಿ ನೀರಿನ ಸಮಸ್ಯೆ ಮತ್ತು ಮೂಲಭೂತ ಸಮಸ್ಯೆಗಳ ಕುರಿತು ಹೇಳಿದರು  ಸಹ ಪಂಚಾಯತ್  ಅಭಿವೃದ್ಧಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಮತ್ತು ಫೋನ್ ಮಾಡಿದರು ಕೂಡ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಪಂಚಾಯತ್  ಅಭಿವೃದ್ಧಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದಲ್ಲಿ  ನೀರಿನ ಸಮಸ್ಯೆ ಮತ್ತು ಮೂಲಭೂತ ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಒಂದು ವೇಳೆ ನಮ್ಮ  ಮನವಿಗೆ ಸ್ಪಂದಿಸದೇ ಇದ್ದಲ್ಲಿ  ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗತ್ತದೆ ಎಚ್ಚರಿಕೆ ನೀಡಿದರು.

ಗ್ರಾಮದಲ್ಲಿ ಕುಡಿಯುವ ನೀರು, ಬಳಸುವ ನೀರು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.

ಎಸ್.ಸಿ. ಸಮುದಾಯ ಭವನದಿಂದ ವಾಲ್ಮೀಕಿ ವೃತ್ತದವರೆಗೆ ಸಿ.ಸಿ. ರಸ್ತೆ ನಿರ್ಮಾಣ ಮಾಡುವುದು.

 ಗ್ರಾಮದಲ್ಲಿ ಸೊಳ್ಳೆ ಕಾಟ ವಿಪರೀತವಾಗಿರುವುದರಿಂದ ಫಾಗಿಂಗ್ ಮಾಡಬೇಕು. ಕಾಲುವೆಗಳನ್ನು ಸ್ವಚ್ಛತೆ ಮಾಡಬೇಕು.

ಈ ಸಂದರ್ಭದಲ್ಲಿ ಆನಂದ ಏಗನೂರು, 

ಯಲ್ಲಪ್ಪ ಭಂಡಾರಿ, ತಿಮ್ಮಪ್ಪ ಕಡಗೋಳ್, ನರಸಿಂಹಲು ಕಮಲಾಪೂರು ಪ್ರಕಾಶ್ ಕುಮಾರ್, ಸೇರಿದಂತೆ ಉಪಸ್ಥಿತರಿದ್ದರು.