ಮರಕುಂದಾದಲ್ಲಿ ವನಮಹೋತ್ಸವ ಕಾರ್ಯಕ್ರಮ ಇಂದು

(ಸಂಜೆವಾಣಿ ವಾರ್ತೆ)
ಬೀದರ :ಜು.8:ತಾಲೂಕಿನ ಮರಕುಂದಾ ಗ್ರಾಮದಲ್ಲಿ ಅರಣ್ಯ ಇಲಾಖೆ ಬೀದರ. ಪರಿಸರ ವಾಹಿನಿ ಬೀದರ್ ಗ್ರಾಮ ಪಂಚಾಯತ ಮರಕುಂದಾ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಪರಿಸರ ಸಂರಕ್ಷಣೆ ಜನ ಜಾಗೃತಿ ಜಾಥ ಕಾರ್ಯಕ್ರಮ ಜುಲೈ 8ರಂದು ಮಧ್ಯಾನ 2.30ಗಂಟೆಗೆ ಇಲ್ಲಿಯ ಗ್ರಾಮ ಪಂಚಾಯತ ಆವರಣದಲ್ಲಿ ಜರುಗಲಿದೆ. ಈ ಕಾರ್ಯಕ್ರಮವನ್ನು ದಕ್ಷಿಣ ಕ್ಷೇತ್ರ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಈ ಕಾರ್ಯಕ್ರಮ ಉದ್ಘಾಟಿಸುವರು. ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪಿ.ಡಿ.ಓ ಹಾಗೂ ಗ್ರಾ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಈ ವನಮಹೋತ್ಸವ ಕಾರ್ಯಕ್ರಮ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ವಿಧ್ಯಾರ್ಥಿಗಳಿಗೆ ಸಸಿ ವಿತರಣೆ ಜರುಗಲಿದೆ. ಗ್ರಾಮದ ಎಲ್ಲಾ ಶಾಲೆಯ ವಿಧ್ಯಾರ್ಥಿಗಳು ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.