ಮರಕ್ಕೆ ಡಿಕ್ಕಿಯಾದ ಓಮಿನಿ;ಚಾಲಕ ಸಾವು


ದಾವಣಗೆರೆ.ನ.13; ಓಮಿನಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳ್ಳದ ದಿಬ್ಬ ಕ್ರಾಸ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಓಮಿನಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಘಟನೆ ಇಂದು ನಸುಕಿನ ಜಾವ ನಡೆದಿದೆ. ಓಮಿನಿ ಶಿವಮೊಗ್ಗ ಮೂಲದ್ದು ಎಂದು ತಿಳಿದುಬಂದಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ.ಘಟನಾ ಸ್ಥಳಕ್ಕೆ ನ್ಯಾಮತಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.