ಮರಳಿ ಗೂಡಿಗೆ ಮುಕುಲ್ ರಾಯ್: ಬಿಜೆಪಿಗೆ ಹೊಡೆತ

ಕೊಲ್ಕತ್ತಾ, ಜೂ.11-ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.

ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.

ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ

ಒಂದು ಕಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಮುಕುಲ್ ರಾಯ್ ಅವರು 2017ರಲ್ಲಿ ಟಿಎಂಸಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿ ಅವರನ್ನು ನಡೆಸಿಕೊಂಡ ವರ್ತನೆಗೆ ಬೇಸತ್ತು ಮರಳಿ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸ್ಥಾಪಕರಲ್ಲೊಬ್ಬರಾಗಿದ್ದ ಮುಕುಲ್ ರಾಯ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.

ಮರಳಿ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ತಾವು ಕೊಠಡಿಯಲ್ಲಿ ತೆರಳಿ ಅಧಿಕಾರ ಸ್ವೀಕರಿಸಿದ ವಿಷಯವಾಗಿತ್ತು.

ಮತ್ತಷ್ಟು ಸರದಿಯಲ್ಲಿ:

ಮುಕುಲ್ ರಾಯ್ ಮತ್ತು ಅವರ ಪುತ್ರ ತೃಣಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾಗುತ್ತಿದ್ದಂತೆ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಅನೇಕ ತೃಣಮೂಲ ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಮರಳಿ ಪಕ್ಷಕ್ಕೆ ಸೇರ್ಪಡೆಯಾಗಲು ಸರದಿ ಸಾಲಿನಲ್ಲಿ ನಿಂತಿದ್ದಾರೆ

ಇದು ಆರಂಭವಷ್ಟೇ ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ