ಮರಳಿ ಬಂದ ಮೇಘನಾ..

ವಿವಿದ ಕಾರಣಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ಮೇಘನರಾಜ್  ಇದೀಗ ಬಣ್ಣಹಚ್ಚಿದ್ದಾರೆ. ಅದುವೇ  ‘ತತ್ಸಮ ತದ್ಭವ’ ಚಿತ್ರದ ಮೂಲಕ. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಈ ವೇಳೆ ಮಾತಿಗಿಳಿದ ನಟಿ ಮೇಘನಾ ರಾಜ್, ‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಸ್ನೇಹಿತರು ನನಗಾಗಿ  ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ  ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಈವರೆಗೂ ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ ಗೊತ್ತಿಲ್ಲ ಎಂದರು.

ನಟ ಪ್ರಜ್ಷಲ್ ದೇವರಾಜ್,ನಿರ್ದೇಶಕರು ಕಥೆ ಹೇಳಿದಾಗ ಇಷ್ಟವಾಯಿತು. ಆ ಪಾತ್ರ ಯಾರು ಮಾಡುತ್ತಿದ್ದಾರೆ ಎಂದಾಗ .ನೀವೆ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದರು.

ನಿರ್ದೇಶಕ ವಿಶಾಲ್ ಆತ್ರೇಯ.,ಇದೊಂದು ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎನ್ನುವ ವಿವರ ನೀಡಿದರು.

ನಿರ್ಮಾಪಕ ಪನ್ನಗ ಭರಣ,  ಚಿತ್ರೀಕರಣ ಮುಕ್ತಾಯವಾಗಿದೆ. ರೀರೆಕಾರ್ಡಿಂಗ್ ನಡೆಯುತ್ತಿದೆ. ಚುನಾವಣೆ ಮುಗಿದ ನಂತರ ಬಿಡುಗಡೆ ಮಾಡುತ್ತೇವೆ ಎಂದು  ತಿಳಿಸಿದರು.   ನಟಿ ಶ್ರುತಿ ಮಾತನಾಡಿ, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ.ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ ಎಂದರು.

ಸಂಗೀತ ನಿರ್ದೇಶಕ ವಾಸುಕಿ ವೈಭವ,ಚಿತ್ರದಲ್ಲಿ ಒಂದು ಹಾಡಿದೆ. ರೀರೆರ್ಡಿಂಗ್ ಕೆಲಸ ನಡೆಯುತ್ತಿದೆ ಎಂದು ಹೇಳಿದರು.