ಮರಳಿ ಬಂದ ಸಚಿನ್

ಐದು ವರ್ಷದ ಹಿಂದೆ ಹ್ಯಾಪಿ ಬರ್ತ್??ಡೇ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾಗಿದ್ದ ನಟ ಸಚಿನ್ ಇದೀಗ “ಬೆಂಗಳೂರು ಬಾಯ್ಸ್” ಮೂಲಕ ಕಂಬ್ಯಾಕ್ ಆಗಿದ್ದಾರೆ.
ಹೊಸ ಉತ್ಸಾಹ, ಹುಮ್ಮಸ್ಸಿನೊಂದಿಗೆ ಚಿತ್ರರಂಗದಲ್ಲಿ ಭರವಸೆ ಮೂಡಿಸಲು ಸಜ್ಜಾಗಿದ್ದಾರೆ.
ಮಾಸ್ ಎಲಿಮೆಂಟ್ಸ್ ಕಥೆ ಆಧರಿಸಿರುವ ’ಬೆಂಗಳೂರು ಬಾಯ್ಸ್’ ಸಿನಿಮಾಗಾಗಿ, ಆ?ಯಕ್ಟಿಂಗ್, ಡ್ಯಾನ್ಸಿಂಗ್ ಜೊತೆ ಫಿಟ್ನೆಸ್ ಕಡೆಗೂ ಹೆಚ್ಚಿನ ಗಮನ ಹರಿಸಿದ್ದಾರೆ.
ಬಹುತಾರಾಗಣದ ಚಿತ್ರವಾಗಿರುವ ಬೆಂಗಳೂರು ಬಾಯ್ಸ್ ಚಿತ್ರದ ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ಸಚಿನ್, ಇದೊಂದು ರೊಮ್ಯಾಂಟಿಕ್ ಕಾಮಿಡಿ ಮನರಂಜನೆಯ ಚಿತ್ರವಾಗಿದ್ದು, ಕಾಲೇಜು, ಎಮೋಷನ್, ಪ್ರೇಮ ಕತೆ ಹೀಗೆ ಎಲ್ಲ ಅಂಶಗಳೂ ಸಿನಿಮಾದಲ್ಲಿವೆ ಎನ್ನುತ್ತಾರೆ. ಈಗಾಗಲೇ ರಿಲೀಸ್ ಆಗಿರುವ ಫಸ್ಟ್ ಲುಕ್ ಟೀಸರ್ ಸಿನಿಮಾ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ.
ವಿಕ್ರಮ್ ಕೆ ವೈ ಸಿನಿಮಾದ ಸಿನಿಮಾಗೆ ಬಂಡವಾಳ ಹೂಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣವಿದೆ.