ಮರಳು ಮಾಫಿಯಾಕ್ಕೆ ಬಲಿಯಾದ ಪೊಲೀಸ್ ಪೇದೆ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ಕಲಬುರಗಿ,ಜೂ.19-ಮರಳು ಮಾಫಿಯಾಕ್ಕೆ ಬಲಿಯಾದ ಹೆಡ್‍ಕಾನ್ಸಸ್ಟೇಬಲ್ ಮಯೂರ ಚೌವಾಣ್ ಅವರ ಮನೆಗೆ ಕನ್ನಡ ಚಳವಳಿ ನಾಯಕ ವಾಟಾಳ ನಾಗರಾಜ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಯೂರ್ ಚೌವಾಣ್ ಅವರ ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಮರಳು ಮಾಫಿಯಾ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು. ಮರಳು ಮಾಫಿಯಾ ತಡೆಯಲು ಹೋದ ಹೆಡ್ ಕಾನ್ಸ್‍ಸ್ಟೇಬಲ್ ಮಯೂರ ಚೌಹಾಣ್ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಕನ್ನಡ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಸೋಮನಾಥ ಎಲ್.ಕಟ್ಟಿಮನಿ, ಶರಣು ಹಂಗರಗಿಮ ಮಂಜುನಾಥ, ಪಾರ್ಥಸಾರಥಿ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.