ಮರಾಠ ಪುಂಡರಿಂದ ಕನ್ನಡಿಗರಿಗೆ ಥಳಿತ

ಬೆಳಗಾವಿ,ಡಿ.೨೦-ಕರ್ನಾಟಕದಲ್ಲಿಯೇ ಕನ್ನಡಿಗರ ಮೇಲೆ ದೌರ್ಜನ್ಯ ನಡೆದಿದ್ದು, ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಕನ್ನಡಿಗ ಯುವಕರಿಗೆ ಮರಾಠ ಪುಂಡರು ಥಳಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.
ಅಂಕಲಿ ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿ ಅಳವಡಿಸಿದ್ದ ಕನ್ನಡ ಧ್ವಜವನ್ನು ತೆರವು ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿತ್ತು. ಅಳವಡಿಸಿದ್ದ ಧ್ವಜವನ್ನು ತೆರವು ಮಾಡುವಂತೆ ಮರಾಠ ಪುಂಡರು ಕನ್ನಡಿಗರಿಗೆ ಥಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೆಲ ಮರಾಠ ಸಮುದಾಯದವರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದಾರೆ.
ಈ ಬಗ್ಗೆ ೫ ಮರಾಠ ಪುಂಡರ ವಿರುದ್ಧ ಸಂಕೇಶ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ಉಳಿದ ನಾಲ್ವರ ಬಂಧನಕ್ಕೆ ಶೋಧ ಕೈಗೊಂಡಿದ್ದಾರೆ.