ಮರಾಠ ಸಮುದಾಯದ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಗೆ ಕರವೇ ಖಂಡನೆ

ಗಂಗಾವತಿ ನ.18: ರಾಜ್ಯ ಸರ್ಕಾರವು ಮರಾಠ ಸಮುದಾಯದ ಅಭಿವೃದ್ಧಿಗಾಗಿ ಪ್ರಾಧಿಕಾರ ಸ್ಥಾಪನೆಗೆ ಅಸ್ತು ಎಂದಿರುವುದಕ್ಕೆ ಕರವೇ ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಖಂಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮರಾಠ ಸಮಾಜದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟು ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಸ್ತು ಎಂದಿರುವುದು ವಿಷಾದನೀಯವಾಗಿದೆ. ಕೂಡಲೇ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಕೈಬಿಡಬೇಕು. ಇಲ್ಲವಾದಲ್ಲಿ ಕರವೇ ಸಂಘಟನೆ ರಾಜ್ಯಾಧ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದರ ಜೊತೆಗೆ ಕರ್ನಾಟಕ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.