ಮಲಪನಗುಡಿ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆ.

ಹೊಸಪೇಟೆ ಮೇ 4: ತಾಲೂಕಿನ ಗ್ರಾಮೀಣ ನೋಡಲ್ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಂ. ಉಮೇಶ್ ಇವರ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಾಳೆಪ್ಪ ಇವರ ಅಧ್ಯಕ್ಷತೆಯಲ್ಲಿ ಪಂಚಾಯತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಜರುಗಿತು.
ಕಳೆದ ಒಂದು ವಾರದಲ್ಲಿ ಮಲಪನಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 76 ಪಾಸಿಟಿವ್ ಪ್ರಕರಣಗಳು ಬಂದಿದ್ದರಿಂದ, ಗ್ರಾಮದಲ್ಲಿ ಹೆಚ್ಚಿನಒತ್ತುನೀಡಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಹಾಗೂ ಪಾಲಿಸಿದವರಿಗೆ ದಂಡ ವಿಧಿಸಲ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಹಾಗೂ ಸದಸ್ಯರುಗಳಿಗೆ ಸಲಹೆ ನೀಡಿದರು. ಮಲಪನಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಮಂಜುನಾಥ್ ಇವರು ಕೂವೀಡ್ ತಡೆಗಟ್ಟುವಲ್ಲಿ ಸಮುದಾಯದ ಸಹಭಾಗಿತ್ವ ಅತ್ಯಂತ ಅವಶ್ಯಕ ಎಂದು ತಿಳಿಸಿದರು. ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ಗ್ರಾಮದ 45 ವರ್ಷ ಮೇಲ್ಪಟ್ಟ ಎಲ್ಲ ವಯಸ್ಕರಿಗೆ ಲಸಿಕೆಯನ್ನು ಪಡೆಯುವಂತೆ ಪ್ರೇರೇಪಿಸಲು ಕೋರಿದರು. ಪ್ರಸ್ತುತ ಮಲಪನಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕೇವಲ 49 % ಜನರು ಮಾತ್ರ ಲಸಿಕೆಯನ್ನು ಪಡೆದಿರುತ್ತಾರೆ, ವೈದ್ಯಕೀಯ ಸಿಬ್ಬಂದಿಗಳು ಗ್ರಾಮಸ್ಥರಿಗೆ ಭೇಟಿ ಮಾಡಿ ಮನವೊಲಿಸಿದರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವುದಕ್ಕೇ ಎಂದು ವೈದ್ಯರು ವಿಷಾದ ವ್ಯಕ್ತಪಡಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಾಳೆಪ್ಪ, ಉಪಾಧ್ಯಕ್ಷ ವಿರುಪಾಕ್ಷ ನಾಯಕ್, ಕಂದಾಯ ನಿರೀಕ್ಷಕ ಅನಿಲ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.