ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ

ಹನೂರು: ಮಾ.26: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಮ.ಮ.ಬೆಟ್ಟದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಬೃಹನ್ಮಠ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅಧ್ಯಕ್ಷತೆಯಲ್ಲಿ ಹುಂಡಿ ಎಣಿಕೆ ಜರುಗಿತು. ಮಹಾಶಿವರಾತ್ರಿ ಪ್ರಯುಕ್ತ 6 ದಿನ ಸ್ಥಳೀಯರನ್ನು ಹೊರತುಪಡಿಸಿ ರಾಜ್ಯ ಸೇರಿದಂತೆ ಇತರ ರಾಜ್ಯಗಳ ಭಕ್ತಾದಿಗಳಿಗೆ ನಿಬರ್ಂಧ ಹೇರಿದ್ದರು ಸಹ 29 ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಭೇಟಿ ನೀಡಿ 1,54,64,147 ರೂ 60 ಗ್ರಾಂ ಚಿನ್ನ 2ಕೆಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪಕಾರ್ಯದರ್ಶಿ ಬಸವರಾಜು , ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬ್ಯಾಂಕ್ ವ್ಯವಸ್ಥಾಪಕರು, ಮ, ಬೆಟ್ಟ ವೃತ್ತನಿರೀಕ್ಷಕ ರಮೇಶ್ ದೇವಾಲಯದ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.