ಮಲ್ಲಿಕಾರ್ಜುನ ಕಾಂಗ್ರೆಸ್ ಓಬಿಸಿ ರಾಜ್ಯ ಕಾರ್ಯದರ್ಶಿ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಏ. 10 :-  ತಾಲೂಕಿನ  ಲೋಕಿಕೆರೆಯ ಲಕ್ಕಜ್ಜಿ ಮಲ್ಲಿಕಾರ್ಜುನ ಅವರನ್ನು  ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ನೇಮಕಮಾಡಿ ರಾಜ್ಯಾಧ್ಯಕ್ಷ ಮಧುಬಂಗಾರಪ್ಪ ಆದೇಶ ನೀಡಿದ್ದಾರೆ.
ತಾಲೂಕಿನ ಲೋಕಿಕೆರೆ ಗ್ರಾಮದ ಕುರುಬ ಸಮುದಾಯದ ಲಕ್ಕಜ್ಜಿ ಮಲ್ಲಿಕಾರ್ಜುನ ಬಹಳಷ್ಟು ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಯಾಗಿದ್ದು ಪಕ್ಷದ ಸಂಘಟನೆ ಮಾಡಿರುವುದನ್ನು ಗುರುತಿಸಿದ ಓಬಿಸಿ ರಾಜ್ಯಾಧ್ಯಕ್ಷ ಮಧುಬಂಗಾರಪ್ಪನವರು ಕೆಪಿಸಿಸಿ  ರಾಜ್ಯಾಧ್ಯಕ್ಷ ಡಿ‌.ಕೆ.ಶಿವಕುಮಾರ್ ಅನುಮೋದನೆ ಮೇರೆಗೆ ಕಾಂಗ್ರೆಸ್ ನ ರಾಜ್ಯ ಹಿಂದುಳಿದ ವರ್ಗಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.