ಮಳಿಗೆ ತೆರವು ಕಾರ್ಯಾಚರಣೆ

ಧಾರವಾಡ, ಜೂ 5: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅನಧೀಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡಲಾಯಿತು.
ನಗರದ ಸುಭಾಷ ರಸ್ತೆಯಲ್ಲಿರುವ ಸೂಪರ್ ಮಾರುಕಟ್ಟೆಯಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಅನಧೀಕೃತ ಅಂಗಡಿಗಳ ತೆರವು ಕಾರ್ಯಾಚರಣೆಗೆ ಮುಂದಾದರು.
ಮಹಾನಗರ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಹಾಗೂ ಪೆÇಲೀಸ್ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ತೆರವುಗೊಳಿಸಲಾಯಿತು.
ಮಳಿಗೆ ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಳಿಗೆ ಮಾಲೀಕರು ತೆರವು ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿದರು. ಮಳಿಗೆ ವ್ಯಾಪಾರಿಗಳು ತೆರವಿಗೆ ವಿರೋಧಿಸಿದರು. ಲಾಕ್‍ಡೌನ ಸಂದರ್ಭದಲ್ಲಿ ಈರೀತಿ ಏಕಾಏಕಿ ಮಳಿಗೆಗಳನ್ನು ತೆರವುಗೊಳಿಸುತ್ತಿರುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.


ಏಕಾಏಕಿ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಮುಂದಾಗಿದ್ದು ಖಂಡನೀಯ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ,
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಚ್. ನೀರಲಕೇರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಪಾಲಿಕೆ ಹಾಗೂ ಪೊಲೀಸ್ ಸಿಬ್ಬಂದಿ ನೂರಾರು ಜನರನ್ನು ಸೇರಿಸಿ ಕೋವಿಡ್ ನಿಯಮಗಳನ್ನು ತಾವೇ ಉಲ್ಲಂಘಿಸಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಕಾನೂನು ಕ್ರಮಕ್ಕೆ ಮುಂದಾಗಬೇಕು. ಅಲ್ಲದೆ ಮಳಿಗೆಯವರಿಗೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ನೂರಾರು ಬಡ ವ್ಯಾಪಾರಸ್ತರನ್ನು ತೆರವು ಮಾಡಿಸುವುದು ಯಾವ ನ್ಯಾಯ ? ಎಂದು ಪ್ರಶ್ನಿಸಿದರು. ವ್ಯಾಪಾರಸ್ತರನ್ನು ಸ್ಥಳಾಂತರಿಸಿದ ನಂತರ ಕ್ರಮಕ್ಕೆ ಮುಂದಾಗಬೇಕು. ಅಭಿವೃದ್ಧಿ ನೆಪದಲ್ಲಿ ಜನರ ಶೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಕೊರೊನಾ ಸಂದರ್ಭದಲ್ಲಿ ಈ ರೀತಿ ಕ್ರಮಕ್ಕೆ ಮುಂದಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.